Oplus_0

ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ, ಆಕ್ಷೇಪಣೆಗೆ ಏ.24 ಕೊನೆ ದಿನ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 5ರಡಿ ಹಾಗೂ 308(ಇ) (ಎಫ್) ರ ಪ್ರಕರಣದಡಿ ಪ್ರದತ್ನವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಚಿತ್ತಾಪುರ ತಾಲೂಕಿನ ಆಯ್ಕೆಯಾಗುವ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ.

ಗುಂಡಗುರ್ತಿ 12, ಇವಣಿ 11, ದಂಡೋತಿ 21, ದಿಗ್ಗಾಂವ 13, ಮೊಗಲಾ 9, ಸಾತನೂರ 14, ಭಾಗೋಡಿ20, ಕಮರವಾಡಿ 14, ಕರದಾಳ 15, ಹಲಕಟ್ಟಾ 20, ಇಂಗಳಗಿ 20, ಲಾಡಾಪೂರ 16, ಅಳ್ಳೋಳ್ಳಿ 20, ಭೀಮನಳ್ಳಿ 16, ಡೋಣಗಾಂವ 13, ಅಲ್ಲೂರ (ಬಿ) 16, ಯಾಗಾಪೂರ 23, ನಾಲವಾರ 31, ಕಡಬೂರ 16, ಕೊಲ್ಲೂರ 15, ಸನ್ನತಿ 12, ರಾಂಪೂರಹಳ್ಳಿ 11.

ಕಲಬುರಗಿ ಜಿಲ್ಲೆಯ, ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ, ಪ್ರಕಟಣೆಯ ದಿನಾಂಕದಿಂದ 7 ದಿನಗಳ ಒಳಗಾಗಿ ಅಂದರೆ ಏ.24 ಸಂಜೆ 5 ಗಂಟೆಯ ಒಳಗೆ ಸಲ್ಲಿಸಲು ತಿಳಿಸಿದೆ. ಆಕ್ಷೇಪಣೆಗಳನ್ನು ಆನ್‌ಲೈನ್ ಮೂಲಕ ಹಾಗೂ ಖುದ್ದಾಗಿ/ಅಂಚೆಯ ಮೂಲಕ ಈ ಕೆಳಕಂಡ ವಿಳಾಸಕ್ಕೆ ಸಲ್ಲಿಸತಕ್ಕದ್ದು ಅಂಚೆಯ ಮೂಲಕ ಸಲ್ಲಿಸಿದಾಗಲೂ, ಆಯೋಗವು ನಮೂದಿಸಿದ ದಿನಾಂಕದೊಳಗೆ ಸಲ್ಲಿಸತಕ್ಕದ್ದು. ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅಂಚೆ ಇಲಾಖೆಯ ವಿಳಂಬಕ್ಕೆ ಆಯೋಗವು ಜವಾಬ್ದಾರರಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

(ಅ) ಆನ್ ಲೈನ್ ಮೂಲಕ: https://rdpr.karnataka.gov.in/rdc/public/ ಮುಖಪುಟದ ಎಡಭಾಗದಲ್ಲಿರುವ ಸಾರ್ವಜನಿಕ ಸಲಹೆಗಳು ಎಂಬ ಶೀರ್ಷಿಕೆಯನ್ನು CLICK ಮಾಡಿ ತಮ್ಮ ಆಕ್ಷೇಪಣೆಗಳನ್ನು ಆನ್‌ಲೈನ್ ನಲ್ಲಿ ಸಲ್ಲಿಸಬಹುದು.

(ಆ) ಖುದ್ದಾಗಿ/ಅಂಚೆ ಮೂಲಕ: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ. 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀದಿ ಬೆಂಗಳೂರು.

ವಿಶೇಷ ಸೂಚನೆ: ಕಲಬುರಗಿ ಜಿಲ್ಲೆಯ ಹನ್ನೊಂದು ತಾಲ್ಲೂಕುಗಳಿಂದ ಆಯ್ಕೆಯಾಗುವ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ ಏ.24 ಒಳಗಾಗಿ ಸಲ್ಲಿಸಲ್ಪಟ್ಟ ಆಕ್ಷೇಪಣೆ/ಅಹವಾಲುಗಳ ಪರಿಶೀಲನಾ ಅದಾಲತ್ ಅನ್ನು ಏ.27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗೇಟ್-ನಂ-2, 2ನೇ ಮಹಡಿ, ಕೊಠಡಿ ಸಂಖ್ಯೆ:229, 230 ಬಹುಮಹಡಿಗಳ ಕಟ್ಟಡ, ಬೆಂಗಳೂರು-560001 ಇಲ್ಲಿ ನಡೆಸಲಾಗುವುದು. ಆಕ್ಷೇಪಣೆ ಮತ್ತು ಅಹವಾಲುಗಳನ್ನು ಸಲ್ಲಿಸಿರುವವರು ಅದಾಲತ್ ನಲ್ಲಿ ಭಾಗವಹಿಸಲು ಇಚ್ಛಿಸಿದಲ್ಲಿ, ಸರ್ಕಾರದಿಂದ ನೀಡಿರುವ ಭಾವಚಿತ್ರವುಳ್ಳ ಗುರುತಿನ ಚೀಟಿಯ ಮೂಲ ಪ್ರತಿಯನ್ನು ತಮ್ಮೊಂದಿಗೆ ಕಡ್ಡಾಯವಾಗಿ ತರತಕ್ಕದ್ದು ಎಂದು ಪಂಚಾಯತ್ ರಾಜ್ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ ಹಾಗೂ ಸದಸ್ಯ ಕಾರ್ಯದರ್ಶಿ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ನಿರ್ದೇಶಕರು ಡಾ.ಎನ್.ನೋಮೇಶ್ ಕುಮಾರ್ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!