ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಶ್ರೀ ನಾರಾಯಣ ಗುರುಗಳ ಅಧ್ಯಯನ ಪೀಠವನ್ನು ಸ್ಥಾಪಿಸಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ
ನಾಗಾವಿ ಎಕ್ಸಪ್ರೆಸ್
ಕಲಬುರ್ಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಶ್ರೀ ನಾರಾಯಣ ಗುರುಗಳ ಅಧ್ಯಯನ ಪೀಠವನ್ನು ಸ್ಥಾಪಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಶ್ರೀ ನಾರಾಯಣ ಗುರುಗಳ ಅಧ್ಯಯನ ಪೀಠವನ್ನು ಸ್ಥಾಪಿಸುವ ಪ್ರಸ್ತಾವನೆಯ ಬಗ್ಗೆ ಪರಿಶೀಲಿಸಿ ಅಭಿಪ್ರಾಯದ ವರದಿಯನ್ನು ಡಾ. ಎಚ್.ಟಿ.ಪೋತೆ, ಪ್ರಾದ್ಯಾಪಕರು ಮತ್ತು ನಿರ್ದೇಶಕರು, ಕನ್ನಡ ಅಧ್ಯಯನ ಸಂಸ್ಥೆ, ಗುಲಬರ್ಗಾ ವಿಶ್ವಾವಿದ್ಯಾಲಯ, ಕಲಬುರಗಿ ಇವರು ಸಿದ್ಧಪಡಿಸಿದ್ದು, ಶ್ರೀ ನಾರಾಯಣ ಗುರುಗಳ ಅಧ್ಯಯನ ಪೀಠ ಸ್ಥಾಪಿಸಲು ಮಂಜೂರಾತಿ ಮತ್ತು ಸರ್ಕಾರದಿಂದ ಆರ್ಥಿಕ ನೆರವು ನೀಡುವಂತೆ ಕೋರುತ್ತಾ ಕುಲಸಚಿವರು, ಗುಲ್ಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಇವರು ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಆದರೆ, ಈವರೆಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಶ್ರೀ ನಾರಾಯಣ ಗುರುಗಳ ಅಧ್ಯಯನ ಪೀಠ ಸ್ಥಾಪಿಸುವ ಸಂಬಂಧ ಯಾವುದೇ ಮಂಜೂರಾತಿ ಅಥವಾ ಸರ್ಕಾರದಿಂದ ಆರ್ಥಿಕ ನೆರವು ಮಂಜೂರಾಗಿರುವುದಿಲ್ಲವೆಂದು ತಿಳಿದುಬಂದಿರುತ್ತದೆ.
ಆದ್ದರಿಂದ ಶ್ರೀ ನಾರಾಯಣ ಗುರುಗಳ ಅಧ್ಯಯನ ಪೀಠ ಸ್ಥಾಪಿಸಲು ಮಂಜೂರಾತಿ ಮತ್ತು ಅಗತ್ಯವಿರುವ ಆರ್ಥಿಕ ನೆರವು ನೀಡುವ ಕುರಿತು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದಾರೆ.