Oplus_0

ಗುಂಡಗುರ್ತಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಪಾಲಕರ ಸಭೆ | ಉತ್ತಮ ಫಲಿತಾಂಶಕ್ಕೆ ಶಿಕ್ಷಕರರು ಶ್ರಮಿಸಿ: ಅರಣಕಲ್ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪ್ರಸ್ತುತ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಾಕಷ್ಟು ಅನುದಾನ ಮತ್ತು ಯೋಜನೆಗಳನ್ನು ಜಾರಿಗೊಳಿಸಿದೆ ಹೀಗಾಗಿ ಶಿಕ್ಷಕರು ಮಕ್ಕಳಿಗೆ ಹೆಚ್ಚಿನ ಮುತುವರ್ಜಿ ವಹಿಸಿ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಫಲಿತಾಂಶ ವೃದ್ಧಿಗೆ ಶ್ರಮಿಸಬೇಕು ಎಂದು ಪಾಲಕರ ಪ್ರತಿನಿಧಿ ದೇವಿಂದ್ರ ಅರಣಕಲ್ ಹೇಳಿದರು.

ತಾಲೂಕಿನ ಗುಂಡಗುರ್ತಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶುಕ್ರವಾರ ನಡೆದ ಪಾಲಕರ ಸಭೆ ಮತ್ತು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಮಕ್ಕಳು ಸಹಿತ ತಮ್ಮ ಜವಾಬ್ದಾರಿಯನ್ನು ಅರಿತು ಓದಿನಲ್ಲಿ ಹೆಚ್ಚು ಆಸಕ್ತಿ ವಹಿಸಿ ಉತ್ತಮ ವಿದ್ಯಾಭ್ಯಾಸ ಮಾಡಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆಯುವ ಮೂಲಕ ಶಾಲೆಗೆ ಹಾಗೂ ತಂದೆ ತಾಯಿಗಳಿಗೆ ಕೀರ್ತಿ ತರಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಜ್ಯೋತಿ ಕರ್ಕಳ್ಳಿ ಮಾತನಾಡಿ, ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಗೆ ಪ್ರತಿ ವರ್ಷ ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ, ಈ ವರ್ಷ ಅತ್ಯುತ್ತಮ ಫಲಿತಾಂಶ ತರುವ ಉದ್ದೇಶ ಹೊಂದಲಾಗಿದೆ ಈಗಿಂದಲೇ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂತೋಷ ಕುಮಾರ್ ಶಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀರಭದ್ರಯ್ಯ ಮಠ ಪ್ರಾರ್ಥಿಸಿದರು, ಅಂಕಿತ್ ನಿರೂಪಿಸಿದರು, ಆಯಿಷಾ ಸಿದ್ದಿಕಿ ವಂದಿಸಿದರು.

Spread the love

Leave a Reply

Your email address will not be published. Required fields are marked *

You missed

error: Content is protected !!