ಗುಂಡಗುರ್ತಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಶೇ.100 ಫಲಿತಾಂಶ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಗುಂಡಗುರ್ತಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾದ ಎಲ್ಲಾ 47 ವಿದ್ಯಾರ್ಥಿನಿಯರು ಪಾಸಾಗಿರುತ್ತಾರೆ. ಅದರಲ್ಲಿ 19 – ಡಿಸ್ಟಿಂಕ್ಷನ್, 21- ಪ್ರಥಮ ಶ್ರೇಣಿ, 5 ದ್ವಿತೀಯ ಶ್ರೇಣಿ, 2-ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಸತಿ ಶಾಲೆಗೆ ನಿವೇದಿತಾ ನಂದಾ ಶೇ.97.92 ರಷ್ಟು ಫಲಿತಾಂಶವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ಚಂದ್ರಶೇಖರ ದೊಡ್ಡಮನಿ, ಕ್ರೈಸ ಸಮನ್ವಯಾಧಿಕಾರಿ ನವೀದ ಅಜುಂ. ವಸತಿ ಶಾಲೆಯ ಪ್ರಾಚಾರ್ಯ ಜ್ಯೋತಿ ಹಾಗೂ ವಸತಿ ಶಾಲೆಯ ಎಲ್ಲಾ ಸಿಬ್ಬಂದಿಗಳು ವಿದ್ಯಾರ್ಥಿನಿಯರ ಈ ಅಭೂತಪೂರ್ವ ಸಾಧನೆಗೆ ಸಂತೋಷವನ್ನು ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
