Oplus_0

ಕಲಬುರಗಿ ಮಳೆಯಲ್ಲಿಯೇ ಹಡಪದ ಅಪ್ಪಣ್ಣ ಸಮಾಜದ ಪ್ರತಿಭಟನೆ | ಮುಂಗಾರು ಅಧಿವೇಶನದಲ್ಲಿ ಹಡಪದ ಅಪ್ಪಣ್ಣ ಸಮಾಜದ ನಾನಾ ಬೇಡಿಕೆಗಳ ಬಗ್ಗೆ ಚರ್ಚಿಸಲು ಮುಖಂಡರ ಆಗ್ರಹ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಹಡಪದ ಅಪ್ಪಣ್ಣ ಸಮಾಜದ ನಾನಾ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ತಿಮ್ಮಾಪೂರ ಸರ್ಕಲ್‌ ದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ  ಮಳೆಯಲ್ಲಿಯೇ ಪ್ರತಿಭಟನೆ ಮೆರವಣಿಗೆ ನಡೆಸಿದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವರಿಗೆ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿ, ಮುಂಗಾರು ಅಧಿವೇಶನದಲ್ಲಿ ನಮ್ಮ ಸಮಾಜದ ಬಗ್ಗೆ ಧ್ವನಿಯಾಗಿ ಮಾತನಾಡುವ ಮೂಲಕ ಈ ಸಮುದಾಯದ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಬೇಕು ಎಂದು ಆಗ್ರಹಿಸಿದರು.

ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತಂದು 50 ಕೋಟಿ ರೂ. ಮೀಸಲಿಡಬೇಕು, ಹಿಂದುಳಿದ ವರ್ಗಗಳಲ್ಲಿ ಅತಿ ಹಿಂದುಳಿದ ಸಣ್ಣ ಸಣ್ಣ ಸಮುದಾಯಕ್ಕೆ ಒಳ ಮೀಸಲಾತಿ ನೀಡಬೇಕು ಮತ್ತು ಕಲಬುರಗಿ ಜಿಲ್ಲೆಯ ಸಮುದಾಯ ಭವನ ಕಟ್ಟಡಕ್ಕೆ 50 ಲಕ್ಷ ರೂ. ಮೀಸಲಿಡಬೇಕು, ಹಾಗೇಯೇ ಕಲಬುರಗಿ ಜಿಲ್ಲೆಯ ವಿಶ್ವವಿದ್ಯಾಲಯದಲ್ಲಿ ಇರುವ ಹಡಪದ ಅಪ್ಪಣ್ಣ ನವರ ಅಧ್ಯಯನ ಪೀಠ ಪ್ರತ್ಯೇಕ ಕಟ್ಟಡಕ್ಕೆ 1 ಕೋಟಿ ನೀಡಬೇಕು, ಮತ್ತು ಬಸವಕಲ್ಯಾಣದಲ್ಲಿ ಇರುವ ಬಸವಣ್ಣನವರ ಅರಿವಿನ ಮನೆಯ ಪಕ್ಕದಲ್ಲಿ ಇರುವ ಶರಣ ಹಡಪದ ಅಪ್ಪಣ್ಣ ನವರ ಅರಿವಿನ ಮನೆ (ಗವಿಯನ್ನು) ಬಿ.ಕೆ.ಡಿ.ಬಿ ಗ ಸೇರ್ಪಡೆ ಮಾಡಿ ಅಭಿವೃದ್ಧಿ ಪಡಿಸಬೇಕು, ಹಾಗೇಯೇ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಬರುವ ನಿಜಸುಖಿ ಹಡಪದ ಅಪ್ಪಣ್ಣ ನವರ ಜನ್ಮಸ್ಥಳ ಮಸಬಿನಾಳ ಹಾಗೂ ನಿಜಮುಕ್ತೆ ಹಡಪದ ಲಿಂಗಮ್ಮ ನವರ ಜನ್ಮಸ್ಥಳ ದೇಗಿನಾಳ ನ್ನು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಿ ಅಭಿವೃದ್ಧಿ ಪಡಿಸುವ ಕಾರ್ಯ ಮಾಡಬೇಕು ‌ಎಂದು ಒತ್ತಾಯಿಸಿದರು.

ಬಸವಕಲ್ಯಾಣ ತಾಲೂಕಿನ ಅನುಭವ ಮಂಟಪದ ಖಾಯಂ ಸದಸ್ಯರನ್ನಾಗಿ ಶ್ರೀ ಅನ್ನಧಾನಿ ಭಾರತೀ ಅಪ್ಪಣ್ಣ ಸ್ವಾಮಿಗಳು ತಂಗಡಗಿ ಪೂಜ್ಯ ರಿಗೆ ನೇಮಕಾತಿ ಮಾಡಬೇಕು, ಈ ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮ ಸಮಾಜದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಯಾವುದಾದರೂ ನಿಗಮ ಮಂಡಳಿ ಅಥವಾ ವಿಧಾನ ಪರಿಷತ್ ಸದಸ್ಯ, ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಮಾಡಬೇಕು. ಮತ್ತು ಹಡಪದ ಅಪ್ಪಣ್ಣ  ಕ್ಷೌರಿಕ ಸಮಾಜದ ಕಾಯಕ ಬಂಧುಗಳಿಗೆ ‘ಅಜಾಮ” ಎಂಬ ಪದಕ್ಕೆ ಕಾನೂನು ಪ್ರಕಾರ ಅಟ್ರಾಸಿಟಿ ಜಾರಿಗೆ ತರುವಂತೆ ಆಗ್ರಹಿಸಿದರು.

ಈ ಸಂಧರ್ಭದಲ್ಲಿ ಶ್ರೀ ಬಾಲ ಬ್ರಹ್ಮಚಾರಿ ರಾಜಶಿವಯೋಗಿ ಸ್ವಾಮಿಗಳು ಶಹಾಬಾದ ಹಾಗೂ ರಾಜ್ಯ ಮಾಜಿ ಸಂ. ಕಾರ್ಯದರ್ಶಿ ಬಸವರಾಜ ಹಳ್ಳಿ, ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಹಡಪದ ಸುಗೂರ ಎನ್, ಜಿಲ್ಲಾಧ್ಯಕ್ಷ ಈರಣ್ಣ ಸಿ ಹಡಪದ ಸಣ್ಣೂರ, ಜಿಲ್ಲಾ ಕಾರ್ಯಾಧ್ಯಕ್ಷ ಭಗವಂತ ಹಡಪದ ಕಿರಣಗಿ, ಜಿಲ್ಲಾ ಪ್ರಕಾರ್ಯದರ್ಶಿ ರಮೇಶ್ ಹಡಪದ ನೀಲೂರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್, ಆನಂದ ಖೇಳಗಿ , ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ ಬಗದುರಿ, ಶಿವಾನಂದ ಬಬಲಾದಿ.ಹಾಗೂ ಕಲಬುರಗಿ ತಾಲ್ಲೂಕಾಧ್ಯಕ್ಷ ಚಂದ್ರಶೇಖರ ತೊನಸನಹಳ್ಳಿ , ಮಲ್ಲಿಕಾರ್ಜುನ ಬನ್ನೂರ, ವಿನೋದ ಅಂಬಲಗಾ, ಸುನೀಲ್ ಬಾಗಹಿಪ್ಫರಗಾ, ಶಂಕರ ಆಳಂದ. ರಮೇಶ್ ಕೊಲ್ಲೂರ.ನಾಗರಾಜ ಸಾತನೂರ. ಸಿದ್ರಾಮ ಯಾಗಾಪೂರ. ರಮೇಶ ಕವಲಗಾ, ಶರಣು ಕೊಲ್ಲೂರ, ಮಲ್ಲಿಕಾರ್ಜುನ ಬೆಳಗುಂಪಿ, ಶಂಕರ ಹರವಾಳ, ಶಿವಲಿಂಗ ಶಹಾಬಾದ.ದೂಳಪ್ಪ ಪೇಠಶಿರೂರ.ಶಿವಕುಮಾರ್ ಕೊಳ್ಳಿ. ಮಲ್ಲಿಕಾರ್ಜುನ ಹಡಪದ ರಾಜ್ಜೊಳ್ಳಾ. ಅನಿಲ ಯು ಲೈಕ್, ಗಂಗಾದರ ಬಿದ್ದಾಪೂರ, ಹಾಗೂ ಸಮಾಜದ ಅನೇಕ ಬಂಧುಗಳು ಭಾಗವಹಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!