Oplus_0

ಐ.ಎ.ಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅಕಾಲಿಕ ನಿಧನಕ್ಕೆ ಸರ್ಕಾರಿ ನೌಕರರ ಸಂಘ ಶೋಕ ವ್ಯಕ್ತ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ವಿಜಯಪುರ ದಿಂದ ಕಲಬುರಗಿ ಗೆ ತೆರಳುತ್ತಿದ್ದ ಐ.ಎ.ಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಇನ್ನೋವಾ ಕಾರು ಜೇವರ್ಗಿ ತಾಲೂಕು ಬೈಪಾಸ್ ಬಳಿ  ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಧ್ಯಕ್ಷ ಬಸವರಾಜ ಬಳೂಂಡಗಿ ಮತ್ತು ಪದಾಧಿಕಾರಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಐ.ಎ.ಎಸ್ ಅಧಿಕಾರಿ ಮಹಾಂತೇಶ ಬೀಳಗಿ ರವರು ಈ ಹಿಂದೆ ದಾವಣಗೇರಾ ಜಿಲ್ಲಾಧಿಕಾರಿಯಾಗಿ ಪ್ರಸ್ತುತ ಬೆಸ್ಕಾಂ  ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಾಮಾಣಿಕ ದಕ್ಷ ಆಡಳಿತಗಾರರಾಗಿದ್ದರು, ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಆ ದೇವರಲ್ಲಿ ಪ್ರಾರ್ಥಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!