ಇಂಗಳಗಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ಮದ್ಯೆ ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಇಂಗಳಗಿ ಗ್ರಾಮದಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಲಿ ಕೆಲಸ ಮಾಡುವ ಕಾರ್ಮಿಕರ ಮದ್ಯೆ ಗುರುವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತ್ಯುತ್ಸವ ಆಚರಣೆ ಮಾಡಲಾಯಿತು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಶೇಖಮ್ಮ ಕುರಿ ಮಾತನಾಡಿ, ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರ ವಹಿಸಿದ್ದರು ಎಂದು ಹೇಳಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ವಾತಂತ್ರ್ಯಕ್ಕೆ ಸಶಸ್ತ್ರ ಹೋರಾಟವನ್ನೂ ನಡೆಸಿದರು ಅವರ ಹೋರಾಟ ಭಾರತ ಸ್ವಾತಂತ್ರ ಪಡೆಯುವಲ್ಲಿ ಜನರನ್ನು ಉತ್ತೇಜಿಸಿ ತನ್ನದೇ ಆದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಲ್ಲಪ್ಪ ನಾಟೀಕಾರ ರತನ್ ಸಂಖನಕರ, ಮಲಮ್ಮ ಸಂಖನಕರ, ರತ್ನಮ್ಮ, ಶಶಿಕಲಾ, ನಿಂಗಣ್ಣ ಪೂಜಾರಿ, ಫಾತಿಮಾ, ಮುಬಾರಕ್, ತಿಪ್ಪಣ್ಣ ಇಂಗಿನಕರ, ಬಿಮರಾಯ ಸಂಖನಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.