ಜ.25 ರಂದು ಕರ್ನಾಟಕ ಸರ್ಕಾರಿ/ಅರೆ ಸರ್ಕಾರಿ ಪ.ಜಾ, ಪ.ಪಂ ನೌಕರರ ಸಂಘ ಚಿತ್ತಾಪುರ ಶಾಖೆಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರಧಾನ: ಚಿಂಚನಸೂರ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಇದೇ ಜ.25 ರಂದು ಮದ್ಯಾಹ್ನ 12.30 ಗಂಟೆಗೆ ಕರ್ನಾಟಕ ರಾಜ್ಯ ಸರ್ಕಾರಿ/ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಠ ಪಂಗಡ ನೌಕರರ ಸಂಘ ಚಿತ್ತಾಪುರ ಶಾಖೆಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ “ಸೇವಾ ರತ್ನ ಪ್ರಶಸ್ತಿ” ಪ್ರಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಅರುಣಕುಮಾರ ಚಿಂಚನಸೂರ ತಿಳಿಸಿದ್ದಾರೆ.
ಅಂದು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬೆಳಗ್ಗೆ 10 ಗಂಟೆಗೆ ಮರೆವಣಿಗೆ ಪ್ರಾರಂಭಿಸಿ ಬಸವೇಶ್ವರ ಕಲ್ಯಾಣ ಮಂಟಪಕ್ಕೆ 11.30 ಕ್ಕೆ ತಲುಪುವುದು ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ದಿವ್ಯಸಾನಿದ್ಯ ಪೂಜ್ಯ ವರಜ್ಯೋತಿ ಬಂತೇಜಿ ಅಣದೂರ ವಹಿಸುವರು, ರಾಜ್ಯಸಭಾ ವಿರೋಧಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಘನ ಉಪಸ್ಥಿತಿಯಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ ಹಾಗೂ ಐ.ಟಿ.ಬಿ.ಟಿ. ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸುವರು, ಲೋಕಸಭೆ ಸದಸ್ಯ ರಾಧಕೃಷ್ಣ ದೊಡ್ಡಮನಿ, ಸಂಘದ ತಾಲೂಕು ಅಧ್ಯಕ್ಷ ಅರುಣಕುಮಾರ ಎಸ್. ಚಿಂಚನಸೂರ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಮಹಾನಗರ ಪಾಲಿಕೆ ಮೇಯರ್ ವರ್ಷಾ ರಾಜೀವ ಜಾನೆ, ಉಪ ಮೇಯರ್ ತೃಪ್ತಿ ಶ್ರೀನಿವಾಸ ಲಾಖೆ, ನಾಗರಡ್ಡಿ ಪಾಟೀಲ ಕರದಾಳ, ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಆಗಮಿಸುವರು.
ಅತಿಥಿಗಳಾಗಿ ಸಂಘದ ರಾಜ್ಯಾಧ್ಯಕ್ಷ ಮಹೇಶ ಸಿ. ಹುಬಳಿ, ಗೌರವಾಧ್ಯಕ್ಷ ವಿಠಲ ಗೋಳಾ, ಕಾರ್ಯಾಧ್ಯಕ್ಷ ಜೈ ಭೀಮ್, ರಾಜ್ಯ ಪ್ರಧಾನ ಕರ್ಯಾದರ್ಶಿ ಸುಧಾಕರ ಎಸ್. ಜಡಗಿ, ರಾಜ್ಯ ಪರಿಷತ್ ಸದಸ್ಯ ಸಂತೋಷ ಸಲಗರ, ಬೆಂಗಳೂರು ನಗರ ಸಂಘದ ಅಧ್ಯಕ್ಷ ಶ್ರೀಧರ ಕೋಟ್ರೇ, ಮನೋವಿಜ್ಞಾನಿ ಡಾ. ದಿಲೀಪಕುಮಾರ ನವಲೆ ಕಲಬುರಗಿ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಸಾಧಕರನ್ನು ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಹಾಗೂ ಎಸ್.ಎಸ್.ಎಲ್.ಸಿ./ ಪಿ.ಯು.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪುರಸ್ಕಾರ, ಡಾ. ಬಿ.ಆರ್. ಅಂಬೇಡ್ಕರ ರವರ ಕುರಿತು ಪ್ರಬಂಧ ಸ್ಪರ್ದೆ, ಭಾಷಣ ಹಾಗೂ ರಸಪ್ರಶ್ನೆ ಸ್ಪರ್ದೆಯಲ್ಲಿ ವಿಜೇತರಾದ ಕಾಲೇಜು ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

