Oplus_0

ಜೆಡಿಎಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾಗಿ ಶಿವುಕುಮಾರ ನಾಟೀಕಾರ ನೇಮಕ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಹಿಂದುಳಿದ ವರ್ಗಗಳ ವಿಭಾಗಕ್ಕೆ ಶಿವುಕುಮಾರ ನಾಟೀಕಾರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕೂಡಲೇ ಜಾರಿಗೆ ಬರುವಂತೆ ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು. ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ದರಾಗಿ, ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ರಾಜ್ಯದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಹಿಂದುಳಿದ ವರ್ಗಗಳ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜೆಡಿಎಸ್ ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!