Oplus_0

ಜಿಲ್ಲಾ ಮಟ್ಟದ ಕ್ರೀಡಾಕೂಟಗಳ ಉದ್ಘಾಟನೆ | ಮಕ್ಕಳ ದೈಹಿಕ ಮಾನಸಿಕ ಬೆಳವಣಿಗೆ ಕ್ರೀಡೆಗಳು ಪೂರಕ: ಬಳೂಂಡಗಿ 

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಪೂರಕವಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹೇಳಿದರು.

ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕ್ರೀಡೆಗಳು ಸೋಲು ಗೆಲುವಿಗೆ ಸೀಮಿತವಾಗಿರದೇ ಮಕ್ಕಳಲ್ಲಿ ಶಿಸ್ತು ಅವರ ಸರ್ವಾಂಗೀಣ ಬೆಳವಣಿಗೆ ಜೊತೆಗೆ ಕ್ರೀಡಾ ಸ್ಫೂರ್ತಿಯನ್ನು ಬೆಳೆಸುತ್ತದೆ. ಅದಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಾದ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಉಪನಿರ್ದೇಶಕರ ಕಚೇರಿಯ ಶಿಕ್ಷಣ ಅಧಿಕಾರಿ ಶಿವಗೊಂಡಪ್ಪ ಕಣ್ಣಿ ವಹಿಸಿದ್ದರು. ಅತಿಥಿಗಳಾಗಿ ರಾಜಶೇಖರ್ ಗೋವಾಯಿಕ, ರವಿ ಕೋಬ್ರಾ, ವಿವಿಧ ಸಂಘಗಳ ಪದಾಧಿಕಾರಿಗಳಾದ ಮಹೇಶ್ ಹೂಗಾರ, ಬೋಜಣ್ಣಗೌಡ ಪಾಟೀಲ, ರಾಜು ದೊಡ್ಡಮನಿ, ಅನೀಲ್ ಕುಮಾರ್, ಅಮರಪ್ಪ, ಬಸವರಾಜ ಹೇರೂರ, ಮಹೇಶ್ ಬಸರಕೋಡ್ ಸೇರಿದಂತೆ ಎಲ್ಲಾ ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!