Oplus_131072

ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ ಜೂ. 28ಕ್ಕೆ, ಹೆಸರು ನೋಂದಾಯಿಸಿಕೊಳ್ಳಲು ಜೂ.27 ಕೊನೆ ದಿನ: ಸಿದ್ದಲಿಂಗ ಬಾಳಿ 

ನಾಗಾವಿ ಎಕ್ಸಪ್ರೆಸ್ 

ಶಹಾಬಾದ: ತಾಲೂಕಿನ ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ ಜೂನ್ 28 ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸಿದ್ದಲಿಂಗ ಬಾಳಿ ತಿಳಿಸಿದ್ದಾರೆ.

ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕನಿಷ್ಠ 5 ವಚನ ಮೇಲ್ಪಟ್ಟು ಹೇಳುವವರು ಭಾಗವಹಿಸಬೇಕು. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ತಾವು ಹೇಳುವ ವಚನಗಳನ್ನು ಬರೆದು ತೀರ್ಪುಗಾರರಿಗೆ ಕೊಡಬೇಕು.

ಪ್ರಾಥಮಿಕ ಮತ್ತು ಪ್ರೌಢ ವಿಭಾಗದಲ್ಲಿ ವಿಜೇತರಾದವರಿಗೆ ಜುಲೈ 2 ರಂದು ನಡೆಯುವ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ ಸಾನಿದ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು. ಆಸಕ್ತರು ಜೂನ್ 27ರ ಒಳಗಾಗಿ 9590092113ಗೆ ಕರೆ ಮಾಡಿ ಹೆಸರು ನೋoದಾಯಿಸಿಕೊಳ್ಳಬೇಕು ಎಂದು ಬಾಳಿ ಅವರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!