Oplus_0

ಜಿಲ್ಲೆಯಲ್ಲಿ ಬರಗಾಲವಿದ್ದು ರೈತರು ಸಂಕಷ್ಟದಲ್ಲಿರುವಾಗ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅದ್ದೂರಿ ಮೆರವಣಿಗೆ ಬೇಕಿತ್ತೇ: ಭೀಮರೆಡ್ಡಿ ಕುರಾಳ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಜಿಲ್ಲೆಯಲ್ಲಿ ತೀವ್ರ ಬರಗಾಲವಿದ್ದು ರೈತರು ಸಂಕಷ್ಟದಲ್ಲಿರುವಾಗ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅದ್ದೂರಿ ಮೆರವಣಿಗೆ ಬೇಕಿತ್ತೇ ಎಂದು ಬಿಜೆಪಿ ಸಹಕಾರ ಪ್ರಕೋಷ್ಠ ಜಿಲ್ಲಾ ಸಂಚಾಲಕ ಭೀಮರೆಡ್ಡಿ ಗೌಡ ಕುರಾಳ ಪ್ರಶ್ನಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಲ್ಲದೆ ಬೆಳೆಗಳು ಒಣಗಿ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಹೀಗಿರುವಾಗ ಸಚಿವ ಪ್ರಿಯಾಂಕ್ ಖರ್ಗೆ ಮಾತ್ರ ಇದಾವುದೂ ಚಿಂತಿಸದೆ ಅದ್ದೂರಿ ಮೆರವಣಿಗೆ ನಡೆಸಿ ರೈತ ಸಮುದಾಯಕ್ಕೆ ತೀವ್ರ ನೋವನ್ನುಂಟು ಮಾಡಿದ್ದಾರೆ.

ಸಂಭ್ರಮಾಚರಣೆಗಿಂತ, ಸಂಕಷ್ಟದಲ್ಲಿರುವ ಜನರಿಗೆ ಮತ್ತು ಜಾನುವಾರುಗಳಿಗೆ ನೆರವಾಗುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ಆದರೆ ಸರ್ಕಾರದ ಜವಾಬ್ದಾರಿಯುತ ಹುದ್ದೆಯಲ್ಲಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬರಗಾಲದ ಸಮಯದಲ್ಲಿ ಅದ್ದೂರಿ ಮೆರವಣಿಗೆಯನ್ನು ನಡೆಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಬರಗಾಲದ ಸಮಯದಲ್ಲಿ ಜನರಿಗೆ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲವಾದ್ದರಿಂದ, ಇಂತಹ ಅನಗತ್ಯ ಖರ್ಚುಗಳನ್ನು ತಡೆಗಟ್ಟಿ ಆ ಹಣವನ್ನು ರೈತರ ನೆರವು ಮತ್ತು ಕುಡಿಯುವ ನೀರಿನಂತಹ ತುರ್ತು ಕೆಲಸಗಳಿಗೆ ಬಳಸಬೇಕು ಎಂದು ಕಿವಿಮಾತು ಹೇಳಿದ್ದಾರೆ.

ರೈತರು ಬೆಳೆ ನಷ್ಟದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವಾಗ, ಸರ್ಕಾರ ಅಥವಾ ಜನಪ್ರತಿನಿಧಿಗಳು ಇಂತಹ ಅದ್ದೂರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಅವರಿಗೆ ನೋವುಂಟು ಮಾಡುತ್ತದೆ ಎಂದು ತಿಳಿಸಿದ್ದಾರೆ.

ಸರ್ಕಾರ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಕ್ಕೆ ಆದ್ಯತೆ ನೀಡಬೇಕೇ ಹೊರತು, ವೈಭವೋಪೇತ ಮೆರವಣಿಗೆಗಳಿಗಲ್ಲ ಎಂದು ಸಲಹೆ ನೀಡಿದ್ದಾರೆ.

“ಸಚಿವ ಪ್ರಿಯಾಂಕ್ ಖರ್ಗೆ ಅವರೇ ಬರೀ ಮೋದಿ ಮತ್ತು ಷಾ ಹಾಗೂ ಆರ್.ಎಸ್.ಎಸ್ ಬಗ್ಗೆ ಟೀಕೆ ಮಾಡುವುದರಲ್ಲೇ ಕಾಲಹರಣ ಮಾಡುವುದನ್ನು ಬಿಟ್ಟು ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿ”.-ಭೀಮರೆಡ್ಡಿ ಗೌಡ ಕುರಾಳ.

Spread the love

Leave a Reply

Your email address will not be published. Required fields are marked *

error: Content is protected !!