ಜು.20 ರಿಂದ ಸಂಸತ್ ಅಧಿವೇಶನ ಪ್ರಾರಂಭ, ಜು.21 ರಂದು ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಅಲಭ್ಯ: ಗುತ್ತೇದಾರ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಸಂಸತ್ ಅಧಿವೇಶನ ಇದೇ ತಿಂಗಳು ಜುಲೈ 20 ರಿಂದ ಪ್ರಾರಂಭಗೊಳ್ಳುತ್ತಿರುವ ಕಾರಣ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಅಧಿವೇಶನದಲ್ಲಿ ಭಾಗವಹಿಸುವುದು ಅನಿವಾರ್ಯವಿರುತ್ತದೆ. ಹೀಗಾಗಿ ಜು.21 ರಂದು ಬೆಂಗಳೂರಿನಲ್ಲಿ ಲಭ್ಯವಿರುವುದಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಎಂಎಲ್ಸಿ ಜಗದೇವ ಗುತ್ತೇದಾರ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನ ಜುಲೈ 21 ರಂದು ಇರುವುದರಿಂದ ಸದರಿ ಅವರು ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೇಹಲಿಯಲ್ಲಿರುವ ಪ್ರಯುಕ್ತ ಜು.21 ರಂದು ಸಾರ್ವಜನಿಕರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳ ಭೇಟಿಗಾಗಿ ಬೆಂಗಳೂರಿನಲ್ಲಿ ಲಭ್ಯವಿರುವದಿಲ್ಲವೆಂಬ ವಿಷಯವನ್ನು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

