ಕಲಬುರ್ಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಾಳೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯದಿನ ಮತ್ತು ಉಪ ಪ್ರಧಾನಿ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ ಆಚರಣೆ
ನಾಗಾವಿ ಎಕ್ಸಪ್ರೆಸ್
ಕಲಬುರ್ಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅ.31 ರಂದು ಬೆಳಿಗ್ಗೆ 10 ಗಂಟೆಗೆ ಉಕ್ಕಿನ ಮಹಿಳೆ ಎಂದು ಹೆಸರು ಪಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯದಿನ ಹಾಗೂ ಉಕ್ಕಿನ ಮನುಷ್ಯರೆಂದು ಬಿರುದು ಪಡೆದ ಮಾಜಿ ಉಪ ಪ್ರಧಾನಿ ಸರ್ದಾರ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ ಆಚರಣೆ ಮಾಡಲಾಗುವದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾನಗರ ಪಾಲಿಕೆಯ ಹಾಲಿ ಮತ್ತು ಮಾಜಿ ಮಹಾಪೌರರು, ಉಪ ಮಹಾಪೌರರು ಹಾಗೂ ಹಾಲಿ ಮತ್ತು ಮಾಜಿ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪ್ರಕಟಣೆ ಮೂಲಕ ಕೋರಿದ್ದಾರೆ.