Oplus_131072

ಆಗಸ್ಟ್ 1 ರಂದು ಕಲಬುರಗಿ ಒಳ ಮೀಸಲಾತಿ ಹೋರಾಟದಲ್ಲಿ 3 ಸಾವಿರ ಜನರು ಭಾಗಿ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಆಗಸ್ಟ್ 1ರಂದು ಕಲಬುರಗಿ ನಗರದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣದಿಂದ 3 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಹಾಗೂ ಸಮಾಜದ ಹಿರಿಯ ಮುಖಂಡ ರಾಜು ಮುಕ್ಕಣ್ಣ ಅವರು ತಿಳಿಸಿದ್ದಾರೆ.

ಈ ಬೃಹತ್ ಪ್ರತಿಭಟನೆಯಲ್ಲಿ ಸಮಾಜದ ಬಾಂಧವರು ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. ಒಳ ಮೀಸಲಾತಿ ಜಾರಿಗಾಗಿ ಮಾದಿಗರು ಮೂರುವರೆ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ ಆದರೂ. ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿ ತರುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ಮಾದಿಗರಲ್ಲಿ ಗೊಂದಲ ಸೃಷ್ಟಿಸುತ್ತ ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಆಗಸ್ಟ್ 1 ರಂದು ಕಲಬುರಗಿ ನಗರದಲ್ಲಿ ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಪರಿಶಿಷ್ಟ ಜಾತಿಯಲ್ಲಿ ಒಳಮಿಸಲಾತಿ ಮೊದಲ ಅಧಿವೇಶನದಲ್ಲೇ ಜಾರಿ ತರುತ್ತೇನೆ ಎಂದು ಸುಳ್ಳು ಹೇಳುತ್ತಾ ಹಾಗೂ ಮೋಸ ಮಾಡುತ್ತಾ ಬಂದಿದ್ದಾರೆ ಎಂದು ಆಕೋಶ ವ್ಯಕ್ತಪಡಿಸಿದ್ದಾರೆ.

ಬೇರೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗಿದೆ. ಆದರೆ ಕರ್ನಾಟಕ ಮಾತ್ರ ಜಾರಿ ಮಾಡುತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇದನ್ನು ಖಂಡಿಸಿ ಕಲಬುರಗಿ ಜಿಲ್ಲಾ ನಗರದಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದು ಇದರಲ್ಲಿ ಯುವಕರು, ಸಮಾಜದ ಮುಖಂಡರುಗಳು, ರಾಜಕೀಯ ನಾಯಕರುಗಳು ಎಲ್ಲರೂ ಪಕ್ಷತೀತವಾಗಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!