Oplus_0

ಕಲಬುರಗಿ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಮಹೇಶ್ವರಿ ಶಿವಕುಮಾರ ವಾಲೆ ನೇಮಕ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಮಹೇಶ್ವರಿ ಶಿವಕುಮಾರ ವಾಲೆ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಗುರುತರವಾದ ಜವಾಬ್ದಾರಿಯನ್ನು ಕೂಡಲೇ ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಲಬುರಗಿ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸೂಚಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!