ಕಲಬುರಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಾಳೆ ಮತ ಪರಿಷ್ಕರಣೆಯ ಎಸ್ಐಆರ್ ಕುರಿತು ಸಭೆ: ಎಂಎಲ್ಸಿ ಗುತ್ತೇದಾರ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಗಸ್ಟ್ 1 ರಂದು ಬೆಳಗ್ಗೆ 11 ಗಂಟೆಗೆ ಮತ ಪರಿಷ್ಕರಣೆಯ SIR ಕುರಿತು ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ಈ ಸಭೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ವಸಂತಕುಮಾರ್, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ವಿಧಾನ ಪರಿಷತ್ ಸದಸ್ಯರು ಹಾಗೂ SIR ಕಲಬುರಗಿ ಜಿಲ್ಲೆಯ ವಿಕ್ಷಕರಾದ ಉಮಾಶ್ರೀ ಅವರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಆದ್ದರಿಂದ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರು, ಮುಖಂಡರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮುಂಚುಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

