ಕಲಬುರಗಿ ಜಿಲ್ಲಾ ಶಾಸಕರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಬಜೆಟ್ ಪೂರ್ವ ಸಭೆ

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ಕಲಬುರಗಿ ಜಿಲ್ಲೆಗೆ ಸಂಬಂಧಿಸಿದಂತೆ ಮುಂಬರುವ ಆಯವ್ಯಯದಲ್ಲಿ ರಸ್ತೆ, ಕುಡಿಯುವ ನೀರು ಮುಂತಾದ ಮಹತ್ತರ ಕಾರ್ಯಕ್ರಮಗಳನ್ನು ಸೇರಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾ ಶಾಸಕರೊಂದಿಗೆ ಗುರುವಾರ ಬಜೆಟ್ ಪೂರ್ವ ಸಭೆ ನಡೆಸಿದರು.

ಮೂಲಭೂತ ಸೌಲಭ್ಯಗಳು ಸೇರಿದಂತೆ ಕೆಲವು ಶಾಶ್ವತ ಕಾಮಗಾರಿಗಳನ್ನು ತೆಗೆದುಕೊಳ್ಳಲು ಶಾಸಕರು ಹಲವಾರು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂ.ವೈ.ಪಾಟೀಲ್, ಬಿ.ಆರ್.ಪಾಟೀಲ್, ಖನಿಜಾ ಫಾತಿಮಾ, ಚಂದ್ರಶೇಖರ ಪಾಟೀಲ್, ಜಗದೇವ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ್, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ ಅವರು ಸಭೆಯಲ್ಲಿ ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!