ಮಲ್ಲಿಕಾರ್ಜುನ ಖರ್ಗೆ ಅವರ ಧೀಮಂತ ಧುರೀಣ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್: ಗುತ್ತೇದಾರ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ನಗರದ ಡಾ. ಎಸ್.ಎಂ. ಪಂಡಿತ ರಂಗ ಮಂದಿರದಲ್ಲಿ ಆಗಸ್ಟ್ 22 ರಂದು ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಧೀಮಂತ ಧುರೀಣ ಎಂಬ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ರವರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ಅದೇ ರೀತಿ ನೂತನವಾಗಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿ ಕಲಬುರಗಿ ನಗರಕ್ಕೆ ಮೊದಲ ಬಾರಿಗೆ ಆಗಮಿಸುತ್ತಿರುವ ಡಾ. ಅಜಯಸಿಂಗ್ ರವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮದ್ಯಾಹ್ನ 3.30 ಗಂಟೆಗೆ ಕಲಬುರಗಿ ನಗರದ ನಗರೇಶ್ವರ ಶಾಲೆಯ ಹತ್ತಿರ ಸ್ವಾಗತಿಸಿ ನಂತರ ಡಾ. ಎಸ್.ಎಂ. ಪಂಡಿತ ರಂಗಮಂದಿರವರೆಗೆ ಮೇರವಣಿಗೆಯ ಮೂಲಕ ಕರೆತಂದು ಸದರಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಪ್ರಯುಕ್ತ ಧೀಮಂತ ಧುರೀಣ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಹಾಗೂ ಸಚಿವರ ಭವ್ಯ ಮೇರವಣಿಗೆ ಮತ್ತು ಸನ್ಮಾನ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರು, ಮುಖಂಡರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

