Oplus_0

ಕಲಬುರ್ಗಿ ಜಿಲ್ಲೆಯಾದ್ಯಂತ ಶೀತ ಗಾಳಿ ಬೀಸುವ ಸಾಧ್ಯತೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಸೂಚನೆ

ನಾಗಾವಿ ಎಕ್ಸಪ್ರೆಸ್

ಕಲಬುರ್ಗಿ: ಭಾರತೀಯ ಹವಾಮಾನ ಇಲಾಖೆಯಿಂದ ಡಿಸೆಂಬರ್ 18 ರಂದು ರೆಡ್ ಅಲರ್ಟ್ ಹಾಗೂ 19 ರಂದು Yellow Alert ಯಲ್ಲೋ ಅಲರ್ಟ್ ಘೋಷಿಸಿದ್ದು ಕಲಬುರ್ಗಿ ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತ ಗಾಳಿ ಬೀಸುವ ಸಾಧ್ಯತೆಯಿರುತ್ತದೆ ಹಾಗೂ ಸಾಮಾನ್ಯ ತಾಪಮಾನಕ್ಕಿಂತ 5-6 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಬೆಳಗ್ಗೆ ಸುರ್ಯೋದಯಕ್ಕಿಂತ ಮುಂಚೆ ಹಾಗೂ ಸುರ್ಯಾಸ್ತದ ನಂತರ ವಾಕಿಂಗ್ ಬರುವವರು ಮುನ್ನೆಚ್ಚರಿಕೆ ವಹಿಸಿಬೇಕೆಂದು ಹಾಗೂ ಗ್ರಾಮಗಳಲ್ಲಿ ಸಾರ್ವಜನಿಕರು ಮತ್ತು ರೈತರು ಅನಾವಶ್ಯಕವಾಗಿ ದ್ವಿ ಚಕ್ರ ವಾಹನಗಳಲ್ಲಿ ಹೊರಗಡೆ ಬರದಿರುಲು ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಹಾಗೂ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮಗಳು:

1. ಸಾರ್ವಜನಿಕರು ಸಾಧ್ಯವಾದಷ್ಟು ಮನೆ ಬಿಟ್ಟು ಹೊರಗಡೆ ಬರದಿರಲು ತಿಳಿಸಿದೆ. ಒಂದು ವೇಳೆ ಅವಶ್ಯವಿದ್ದಲ್ಲಿ ಬೆಚ್ಚನೆಯ ಉಡುಪುಗಳಾದ ಸ್ಟೇಟರ್, ಜಾಕೇಟ್, ಉಲನ್ ಟೋಪಿ ಕಾಲುಕುಬಸ್, ಕೈ ಗೌಸ್ ಗಳನ್ನು ಧರಿಸಲು ಸೊಚಿಸಿದೆ. ಅದೇ ರೀತಿ ಮಕ್ಕಳನ್ನು ಸಹ ಮನೆಯಿಂದ ಹೊರಗಡೆ ಬಿಡದಿರಲು ತಿಳಿಸಿದೆ.

2. ರೈತ ಬಾಂದವರು ಈ ದಿವಸಗಳಲ್ಲಿ ವಿಶೇಷವಾಗಿ ರಾತ್ರಿ ಸಮಯದಲ್ಲಿ ಹೊಲಗಳಲ್ಲಿ ತಂಗುವುದು ಮತ್ತು ಹಗಲಿನಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳದಿರಲು ತಿಳಿಸಿದೆ. ಅವಶ್ಯವಿದ್ದಲ್ಲಿ ಮಾತ್ರ ಬೆಚ್ಚನೆಯ ಉಡುಪುಗಳಾದ ಸ್ಟೇಟರ್, ಜಾಕೇಟ್, ಉಲನ್ ಟೋಪಿ ಗಳನ್ನು ಧರಿಸಲು ತಿಳಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ರೈತರು ಹಿಂಗಾರು ಬೆಳೆಗಳಿಗೆ ಶೀತ ಗಾಳಿಯ ಪ್ರಭಾವವನ್ನು ಪ್ರತಿರೋದಿಸಲು Planofix 0.5 ಮಿಲಿ ಪ್ರತಿ ಲೀಟರ ನೀರಿಗೆ ಬೆರಿಸಿ ಸಿಂಪಡಿಸಲು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!