Oplus_0

ಕಲಬುರಗಿ ಜಿಲ್ಲೆಯಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟ ತಡೆಗೆ ಪೊಲೀಸ್ ಇಲಾಖೆಯಿಂದ ದಿಟ್ಟ ಕ್ರಮ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಶಹಾಬಾದ ಉಪವಿಭಾಗದ ಡಿವೈಎಸ್ಪಿ ಶಂಕರಗೌಡ ಪಾಟೀಲ ನೇತೃತ್ವದಲ್ಲಿ ಗಾಂಜಾ ಹಾಗೂ ಇತರೆ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಯಿತು.

ಈ ಕಾರ್ಯಾಚರಣೆಯಲ್ಲಿ ಗಾಂಜಾ/ಮಾದಕ ವಸ್ತುಗಳ ಸಾಗಾಣಿಕೆ ಹಾಗೂ ಮಾರಾಟದಲ್ಲಿ ಈ ಹಿಂದೆ ಭಾಗಿಯಾಗಿದ್ದ ಆರೋಪಿತರ ಚಲನ-ವಲನಗಳ ಮೇಲೆ ನಿಗಾ ವಹಿಸುವ ದೃಷ್ಟಿಯಿಂದ, ತೆಲಂಗಾಣ ರಾಜ್ಯದಲ್ಲಿ ದಾಖಲಾಗಿರುವ ಗಾಂಜಾ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಾಡಬೂಳ ಠಾಣಾ ವ್ಯಾಪ್ತಿಯ ಆರೋಪಿತರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾಡಬೂಳ ಪೊಲೀಸ್ ಠಾಣೆಯ ಪಿಎಸ್ಐ ಗೌತಮ್ ಗುತ್ತೇದಾರ (ಕಾನೂನು ಮತ್ತು ಸುವ್ಯವಸ್ಥೆ), ಪಿಎಸ್ಐ ಸಿದ್ದಲಿಂಗ (ತನಿಖೆ), ಎಎಸ್ಐ ಗುಂಡಪ್ಪ, ಠಾಣೆಯ ಹೆಡ್ ಕಾನ್ಸ್ಟೇಬಲ್ ರವರಾದ  ವೀರಶೆಟ್ಟಿ , ವಿಜಯ ನಾರಾಯಣ ಮತ್ತು ಪೊಲೀಸ್ ಕಾನ್ಸ್ಟೇಬಲ್ ರಾದ ರಮೇಶ, ಸಂಗಣ್ಣ ಗಪೂರ್, ಅರುಣ್, ಅಬ್ದುಲ್ ರೆಹಮಾನ್, ಮಹಿಳಾ ಪೇದೆಯಾದ ರಾಜಶ್ರೀ ಹಾಗೂ Narcotic ಶ್ವಾನ “ಜಿಮ್ಮಿ” ಯೊಂದಿಗೆ ಆರೋಪಿತರ ಮನೆಗಳನ್ನು ಸಮಗ್ರವಾಗಿ ಪರಿಶೀಲಿಸಲಾಯಿತು.

ಗಾಂಜಾ ಮತ್ತು ಇತರೆ ಮಾದಕ ವಸ್ತುಗಳ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡತಕ್ಕದ್ದು ಇದರ ಬಗ್ಗೆ ನಿಯಂತ್ರಣ ಸಾಧಿಸಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲಾ ಪೊಲೀಸ್ ವತಿಯಿಂದ ಗಾಂಜಾ ಹಾಗೂ ಇತರೆ ಮಾದಕ ವಸ್ತುಗಳ ಅಕ್ರಮ ಸಾಗಾಣಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದ್ದು, ಮಾದಕ ವಸ್ತುಗಳಿಗೆ ಸಂಬಂಧಿಸಿದ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!