ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾದ ಸುಳ್ಳು ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಆಗ್ರಹಿಸಿ ಕಲಬುರ್ಗಿಯಲ್ಲಿ ನಾಳೆ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಕನೂರ ಮನವಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲರೋಜ್ ಗ್ರಾಮದ ಶ್ರೀ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದಾಖಲಾದ ಸುಳ್ಳು ಪೋಕ್ಸೋ ಪ್ರಕರಣ ಹಿಂದಕ್ಕೆ ಪಡೆದು ರದ್ದುಪಡಿಸಬೇಕು, ಸುಳ್ಳು ಪ್ರಕರಣ ದಾಖಲಿಸಿದ, ಅದಕ್ಕೆ ಪ್ರೋತ್ಸಾಹಿಸಿರುವ ಅಧಿಕಾರಿಗಳ ಮತ್ತು ಬಾಲಕಿಯ ಕುಟುಂಬದ ಮಾನ ಹರಾಜು ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಲಬುರಗಿ ನಗರದಲ್ಲಿ (ಮಾ.2 ರಂದು) ನಾಳೆ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಚಿತ್ತಾಪುರ ತಾಲೂಕಿನ ಕೋಲಿ ಸಮಾಜದ ಜನರು ಹಾಗೂ ಮಲ್ಲಿಕಾರ್ಜುನ ಮುತ್ಯಾ ಅವರ ಭಕ್ತಾದಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾಜಿ ತಾಲೂಕು ಅಧ್ಯಕ್ಷ ಹಣಮಂತ ಸಂಕನೂರ ಮನವಿ ಮಾಡಿದ್ದಾರೆ.
ಕಲಬುರಗಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

