ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ನಾಳೆ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ: ಗುತ್ತೇದಾರ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ನಾಳೆ ಸೋಮವಾರ ಬೆಳಿಗ್ಗೆ 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.
ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿರುವುದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಹೀಗಾಗಿ ಪಕ್ಷದ ಎಲ್ಲ ಹಿರಿಯ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

