ಕಲಬುರ್ಗಿಯಲ್ಲಿ ನಾಳೆ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಸಮಾರಂಭ ಚಿತ್ತಾಪುರದಿಂದ 500 ಜನರು ಭಾಗಿ: ಬೆಣ್ಣೂರಕರ್
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರ್ಗಿ ನಗರದ ಎಸ್.ಎಮ್.ಪಂಡಿತ್ ರಂಗಮಂದಿರದಲ್ಲಿ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ವತಿಯಿಂದ ಜನವರಿ 24 ರಂದು ಬೆಳಗ್ಗೆ 10.30 ಕ್ಕೆ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಸಮಾರಂಭ ನಡೆಯಲಿದೆ ಆದ್ದರಿಂದ ಬುದ್ಧಿಜೀವಿಗಳು, ಪ್ರಜ್ಞಾವಂತರು, ನ್ಯಾಯವಾದಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್ ಕೋರಿದ್ದಾರೆ.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಚಿತ್ತಾಪುರದಿಂದ 500 ಜನರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಬಿಜೆಪಿ ಓಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯ ಡಾ. ಕೆ. ಲಕ್ಷ್ಮಣ್ ಅವರು ಉದ್ಘಾಟನೆ ಮತ್ತು ಸಂವಿಧಾನ ಬದಲಾಯಿಸಿದ್ದು ಯಾರು? ಪುಸ್ತಕ ಲೋಕಾರ್ಪಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಕಾರಜೋಳ, ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.