ಕಾಳಗಿ ಪಟ್ಟಣದಲ್ಲಿ ಡಿಸೆಂಬರ್ 2 ರಂದು 538ನೇ ಭಕ್ತ ಕನಕದಾಸರ ಜಯಂತ್ಯೋತ್ಸವ ಸಮಾರಂಭ: ಹಣಮಂತ ಬೆಂಕಿ

ನಾಗಾವಿ ಎಕ್ಸಪ್ರೆಸ್

ಕಾಳಗಿ: ಕರ್ನಾಟಕ ಪ್ರದೇಶ ಕುರುಬ ಗೊಂಡ ಸಂಘ ಕಾಳಗಿ ತಾಲೂಕು, ಸರ್ಕಾರಿ ನೌಕರರ ಸಂಘ, ಯುವ ಕುರುಬ ಗೊಂಡ ಹಾಗೂ ಕಾಂತಿವೀರ ಸಂಗೋಳ್ಳಿ ರಾಯಣ್ಣ ಸಂಘ ಮಹಿಳಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ 538ನೇ ಭಕ್ತ ಕನಕದಾಸರ ಜಯಂತ್ಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಕುಲ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕುರುಬ ಗೊಂಡ ಸಂಘದ ತಾಲೂಕು ಕಾರ್ಯಾಧ್ಯಕ್ಷ ಹಣಮಂತ ಬೆಂಕಿ ಮುಗಟಾ ಮನವಿ ಮಾಡಿದ್ದಾರೆ.

ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ಧರಾಮನಂದ ಪುರಿ ಮಹಾಸ್ವಾಮಿಗಳು, ಸೂಗೂರ ಶ್ರೀ ಡಾ.ಚನ್ನರುದ್ರಮುನಿ ಶಿವಾಚಾರ್ಯರು, ಕಾಂತಪ್ಪ ಪೂಜಾರಿ ಮಾಡಬೂಳ, ನಿರಗುಡಿ ಶ್ರೀ ಹವಾ ಮಲ್ಲಿನಾಥ ಮಹಾರಾಜರು, ಬೀರಣ್ಣ ಪೂಜಾರಿ ಕೋರವಾರ ಅವರು ಸಾನಿಧ್ಯ ವಹಿಸುವರು. ಸಮಾರಂಭದ ಅಧ್ಯಕ್ಷತೆ ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ ವಹಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟನೆ ಮಾಡುವರು ಎಂದು ತಿಳಿಸಿದ್ದಾರೆ.

ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಬಸವರಾಜ ಮತ್ತಿಮಡು, ಜಗದೇವ ಗುತ್ತೇದಾರ ಕಾಳಗಿ, ತಿಪ್ಪಣ್ಣಪ್ಪ ಕಮಕನೂರ, ಮಾಜಿ ಸಚಿವ ಬಂಡೆಪ್ಪ ಕಾಶಾಂಪುರ, ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಬಾಳ, ರಘುನಾಥ ರಾವ್ ಮಲ್ಕಾಪುರೆ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ, ಬೀದರ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೊಡೆ, ಕುರುಬ ಗೊಂಡ ಸಮಾಜದ ಜಿಲ್ಲಾಧ್ಯಕ್ಷ ಗುರುನಾಥ್ ಪೂಜಾರಿ, ಪಂಡೀತರಾವ್ ಚಿದ್ರಿ, ಬಸವರಾಜ ಬೆಣ್ಣೂರಕರ್, ಶಂಭುಲಿಂಗ ಗುಂಡಗುರ್ತಿ, ರಾಜೇಶ್ ಗುತ್ತೇದಾರ, ಬಾಲರಾಜ್ ಗುತ್ತೇದಾರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!