ಕಾಳಗಿಯಲ್ಲಿ ಡಾ. ಫಾರೂಕ್ ಮಣ್ಣೂರ ನೇತೃತ್ವದಲ್ಲಿ ಎಸ್ಐಆರ್ ಜಾಗೃತಿ ಸಭೆ
ನಾಗಾವಿ ಎಕ್ಸಪ್ರೆಸ್
ಕಾಳಗಿ: ಎಸ್ಐಆರ್ ಕುರಿತು ಸಮಾಜದಲ್ಲಿ ಅನಗತ್ಯ ಭಯ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನು ಪಡೆದು ಕಾರ್ಯನಿರ್ವಹಿಸಬೇಕು ಎಂದು ಸಮಾಜ ಸೇವಕ ಡಾ. ಫಾರೂಕ್ ಮಣ್ಣೂರ ಕಿವಿಮಾತು ಹೇಳಿದ್ದರು.
ಪಟ್ಟಣದಲ್ಲಿ ಡಾ. ಫಾರೂಕ್ ಮಣ್ಣೂರ ಅವರ ನೇತೃತ್ವದಲ್ಲಿ ಹಮ್ಮಿಕೊಂಡ ಎಸ್ಐಆರ್ ಜಾಗೃತಿ ಸಭೆಯಲ್ಲಿ ಮಾತನಾಡಿ, ಎಸ್ಐಆರ್ ಪ್ರಕ್ರಿಯೆ ನಡೆಯುವ ವೇಳೆ ಬಿಎಲ್ಒಗಳಿಗೆ ಅಗತ್ಯ ದಾಖಲೆ ಹಾಗೂ ಸಮರ್ಪಕ ಮಾಹಿತಿಯನ್ನು ಒದಗಿಸಿ ಪರಿಶೀಲನೆಗೆ ಸಹಕರಿಸಬೇಕು. ಪ್ರತಿಯೊಬ್ಬರೂ ತಮ್ಮ ಮತದಾರರ ಹಕ್ಕು ಸುರಕ್ಷಿತವಾಗಿರುವಂತೆ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಪ್ರತಿಯೊಬ್ಬ ನಾಗರಿಕರು ಜವಾಬ್ದಾರಿಯಿಂದ ಪೂರ್ಣಗೊಳಿಸಿ, ಯಾವುದೇ ಅರ್ಹ ಮತದಾರರ ಹೆಸರು ಮತಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದರು.
ಈ ಸಂದರ್ಭದಲ್ಲಿ ಹಫೀಜ್ ಅಲ್ತಾಫ ಮೌಲಾನಾ, ಅಫಜಲ್ ಮಹೆಮೂದ, ಜಿಯಾವೊದ್ದಿನ ಸೌದಾಗರ, ಹೈದರ ಅಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

