ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳ ನಿರ್ಮಾಣ: ಪ್ರಿಯಾಂಕ್ ಖರ್ಗೆ 

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು 2025 ರ ಜನವರಿ ಅಂತ್ಯದೊಳಗೆ ಶೌಚಾಲಯಗಳ ನಿರ್ಮಾಣವನ್ನು ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಸಜ್ಜುಗೊಳಿಸಬೇಕೆಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ನಡೆದ ವಿಮರ್ಶಾ ಸಭೆಯಲ್ಲಿ ಮಾತನಾಡಿದ ಅವರು, ಶೌಚಾಲಯ ನಿರ್ಮಾಣದ ನಂತರ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ಮಾಣ ಸಂಸ್ಥೆಗೆ ಒಪ್ಪಿಸಲಾಗುತ್ತಿದ್ದು ಇದು ವಿನೂತನ ಪ್ರಯೋಗವಾಗಿದೆ. ನಿರ್ಮಾಣದ ನಂತರ ನಿರ್ವಹಣೆಯಿಲ್ಲದೆ ಸೊರಗಬಾರದು ಎಂಬ ಉದ್ದೇಶದಿಂದ ಈ ಹೊಸ ಪದ್ಧತಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಿ ಶೌಚಾಲಯಗಳ ನಿರ್ಮಾಣವನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದ್ದಾರೆ.

ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀರು ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿರುವುದರಿಂದ ಆದ್ಯತೆಯ ಮೇಲೆ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸುವುದಕ್ಕೆ ನಮ್ಮ ಸರ್ಕಾರ ಸದಾ ಬದ್ದವಾಗಿರಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!