Oplus_131072

ಕರದಾಳ ಗ್ರಾಮದಲ್ಲಿ ಜನ ಸುರಕ್ಷಾ ಶಿಬಿರ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ತಾಲೂಕಿನ ಕರದಾಳ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಸಹಯೋಗದಲ್ಲಿ ಮಂಗಳವಾರ ಜನ ಸುರಕ್ಷಾ ಶಿಬಿರ ನಡೆಯಿತು.

ಚಿತ್ತಾಪುರ ಕೆನರಾ ಬ್ಯಾಂಕ್ ವ್ಯವಸ್ಥಾಪಕ ರಾಕೇಶ್ ಕುಲಕರ್ಣಿ ಮಾತನಾಡಿ, ಕೇಂದ್ರ ಸರ್ಕಾರ ಬ್ಯಾಂಕ್ ಗಳ ಮೂಲಕ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ, ಹೀಗಾಗಿ ಜನರು ಇವುಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಅಟಲ್ ಪಿಂಚಣಿ ಯೋಜನೆಗಳ ಬಗ್ಗೆ ಕೆನರಾ ಬ್ಯಾಂಕ್ ಸಲಹೆಗಾರರು ಎಎಫ್ಎಲ್ಸಿ ರೇಖಾ ತಳವಾರ ಜನರಿಗೆ ಮಾಹಿತಿ ನೀಡಿದರು.

ಪಿಎಂಎಸ್ಬಿವೈ 37, ಪಿಎಂಜೆಜೆಬಿವೈ 18,  ಸೇರಿದಂತೆ ಒಟ್ಟು 55 ಜನರು ಈ ಎಲ್ಲಾ ಯೋಜನೆಗಳನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!