Oplus_0

ಕಾಟಮ್ಮದೇವರಹಳ್ಳಿ ಗ್ರಾಮದಲ್ಲಿ  ಕ್ರಿಕೆಟ್ ಪಂದ್ಯಾವಳಿ | ಕ್ರಿಕೆಟ್ ಎಲ್ಲರಿಗೂ ಅಚ್ಚುಮೆಚ್ಚಿನ ಕ್ರೀಡೆ: ಮತ್ತಿಮುಡು

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಹಲವು ಕ್ರೀಡೆಗಳಲ್ಲಿಯೇ ಕ್ರಿಕೆಟ್ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಅಚ್ಚುಮೆಚ್ಚಿನ ಕ್ರೀಡೆ ಎಂದು ತಾಲೂಕು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಗುಂಡು ಮತ್ತಿಮುಡು ಹೇಳಿದರು.

ತಾಲೂಕಿನ ಕಾಟಮ್ಮದೇವರಹಳ್ಳಿ ಗ್ರಾಮದಲ್ಲಿ ಶ್ರೀ ರೇಣುಕಾ ಪರಮೇಶ್ವರಿ (ಯಲ್ಲಮ್ಮತಾಯಿ) 74ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾ ಮೈದಾನ ಕೊರತೆ ಇದ್ದರೂ ಗ್ರಾಮೀಣ ಭಾಗದಲ್ಲಿ ಕ್ರೀಡಾಪಟುಗಳಿಗೆ ಕೊರತೆ ಇಲ್ಲ. ಪ್ರತಿಭೆಗಳು ಹಳ್ಳಿಯಿಂದಲೇ ಹೊರಬರುತ್ತವೆ ಹೀಗಾಗಿ ಯಾರೂ ಹಿಂಜರಿಯಬಾರದು ಆತ್ಮವಿಶ್ವಾಸದಿಂದಲೇ ಭಾಗವಹಿಸಬೇಕು ಎಂದು ಹೇಳಿದರು.

ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿ ಗ್ರಾಮದಲ್ಲಿ ಒಂದು ಉತ್ತಮ ವಾತಾವರಣ ನಿರ್ಮಾಣ ಮಾಡಿದ ಯಾಗಾಪೂರ ಸಹೋದರರ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಯುವ ಮುಖಂಡ ಮದನ್ ಯಾಗಾಪೂರ ಮಾತನಾಡಿ, ಯಾವುದೇ ಕ್ರೀಡೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಆದರೆ ಇಲ್ಲಿ ಭಾಗವಹಿಸುವುದು ಮುಖ್ಯ. ಗೆದ್ದವರು ಹಿಗ್ಗಬಾರದು, ಸೋತವರು ಕುಗ್ಗಬಾರದು ಎಂದು ಕಿವಿಮಾತು ಹೇಳಿದರು.

ಹಿರಿಯ ಪತ್ರಕರ್ತ ಕಾಶಿನಾಥ ಗುತ್ತೇದಾರ ಮಾತನಾಡಿ, ಕ್ರಿಕೆಟ್ ಪಂದ್ಯಾವಳಿ ಜೊತೆಗೆ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಜೀವಂತವಾಗಿ ಉಳಿಸುವಂತೆ ಮಾಡಬೇಕು. ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡೆಗಳು ಬಹಳ ಮುಖ್ಯ ಹೀಗಾಗಿ ಇಂದಿನ ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯವನ್ನು ಹಾಳು ಮಾಡಿಕೊಳ್ಳದೇ ಕಾಪಾಡಿಕೊಳ್ಳಬೇಕು ಎಂದರು.

ಯಾವುದೇ ಪಂದ್ಯಾವಳಿ ಇರಲಿ ಕ್ರೀಡಾಪಟುಗಳು ಕಾಟಾಚಾರಕ್ಕೆ ಭಾಗವಹಿಸಬಾರದು ಗೆದ್ದೇ ಗೆಲ್ಲುತ್ತೇನೆ ಎನ್ನುವ ಆತ್ಮವಿಶ್ವಾಸದಿಂದ ಮೈದಾನಕ್ಕೆ ಇಳಿಯಬೇಕು ಎಂದು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಶಿವುಕುಮಾರ ಯಾಗಾಪೂರ, ಬಿಜೆಪಿ ಯುವ ಅಧ್ಯಕ್ಷ ದೇವರಾಜ್ ತಳವಾರ, ಪತ್ರಕರ್ತ ರವಿಶಂಕರ್ ಬುರ್ಲಿ, ಗ್ರಾಪಂ ಸದಸ್ಯರಾದ ಕೆಂಚಪ್ಪ ಪೂಜಾರಿ, ದ್ಯೇವಣ್ಣ ಹಳ್ಳಿ, ಶರಣು ಜಿಡಗಿ, ಶ್ರೀನಿವಾಸ ಯಾಗಾಪೂರ, ಅರುಣಕುಮಾರ ಯಾಗಾಪೂರ, ಮೋನು ಚವ್ಹಾಣ, ಶರಣು ಬುಸ್ಸಾ, ಬಸವರಾಜ ಸಂಗಾವಿ ಸೇರಿದಂತೆ ಇತರರು ಇದ್ದರು. ರಾಮು ಭೋವಿ ನಿರೂಪಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!