ಚಿತ್ತಾಪುರಕ್ಕೆ ಎಲ್.ಟಿ.ಟಿ ಮತ್ತು ಕೊನಾರ್ಕ್ ಎರಡು ರೈಲುಗಳು ನಿಲ್ಲಿಸುವಂತೆ ಬಿಜೆಪಿ ಮುಖಂಡರು ಕೇಂದ್ರ ಸಚಿವರಿಗೆ ಮನವಿ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಭಾನುವಾರ ಕಲಬುರಗಿ ನಗರಕ್ಕೆ ಆಗಮಿಸಿದ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣರವರಿಗೆ ಚಿತ್ತಾಪುರ ಬಿಜೆಪಿ ಮುಖಂಡರು ಭೇಟಿ ಮಾಡಿ ಸನ್ಮಾನಿಸಿ, ಚಿತ್ತಾಪುರ ರೈಲ್ವೆ ನಿಲ್ದಾಣದಲ್ಲಿ ಎಲ್.ಟಿ.ಟಿ ಮತ್ತು ಕೊನಾರ್ಕ್ ಎರಡು ರೈಲುಗಳ ನಿಲ್ಲಿಸುವಂತೆ ಒತ್ತಾಯಿಸಿ ಮನವಿ ಮಾಡಿದರು.
ಚಿತ್ತಾಪುರ ರೈಲ್ವೆ ನಿಲ್ದಾಣದ ಕುಂದುಕೊರತೆಗಳ ಬಗ್ಗೆ ಮನವಿ ಸಲ್ಲಿಸಿ ಚರ್ಚಿಸಲಾಯಿತು. ಈ ಸಂಧರ್ಬದಲ್ಲಿ ಚಿತ್ತಾಪುರ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಮುಖಂಡರಾದ ನಾಗರಾಜ ಹೂಗಾರ, ಚಂದ್ರು ಕಾಳಗಿ, ಶಿವರಾಮ ಚವ್ಹಾಣ, ಅಕ್ಕಮಹಾದೇವಿ ನಾಗೇಶ, ರಮೇಶ್ ಕಾಳನೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

