ಜಿಲ್ಲಾಧಿಕಾರಿ ಸೂಚಿಸಿದ್ದರೂ ಕ್ರಮ ಕೈಗೊಳ್ಳದ ತಹಸೀಲ್ದಾರ್ | ಕೊಂಚೂರ ಹನುಮಾನ ದೇವಸ್ಥಾನದ ನಕಲಿ ಟ್ರಸ್ಟ್ ರಚಿಸಿ ಅವ್ಯವಹಾರ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರೈತ ಸಂಘ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಕೊಂಚೂರ ಗ್ರಾಮದ ಪ್ರಸಿದ್ಧ ಶ್ರೀ ಹನುಮಾನ ದೇವಸ್ಥಾನದ ಹೆಸರಲ್ಲಿ ನಕಲಿ ಟ್ರಸ್ಟ್ ರಚಿಸಿ ಸಾಕಾಷ್ಟು ಅವ್ಯವಹಾರ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಮೇಶ ಭೀಮರಾಯ ಡಿ.ಸಿ ಆಗ್ರಹಿಸಿದ್ದಾರೆ.
ತಾಲೂಕಿನ ಕೊಂಚೂರ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಹೆಸರಿನಲ್ಲಿ ನಕಲಿ ಟ್ರಸ್ಟ್ ಸ್ಟಾಪಿಸಿ ದೇವಸ್ಥಾನದ ಅಧಿಕಾರ ದುರ್ಬಳಕೆ ಮಾಡಿಕೊಂಡು, ದೂರದ ಅಂಧ್ರ ಮೂಲದ ವಾಸಿಗಳು ದೇವರ ಹೆಸರಿನಲ್ಲಿ ಊರಿನ ಜನರನ್ನು ನಂಬಿಸಿ, ಹಣ, ಬಂಗಾರ ಮತ್ತು ದೇವಸ್ಥಾನದ ಜಾಗವನ್ನು ದುರ್ಬಳಕೆ ಮಾಡಿಕೊಂಡು ಊರಿನ ಜನರಲ್ಲಿ ದ್ವೇಷದ ವಿಷಬೀಜ ಬಿತ್ತಿ ನಮ್ಮಗಳ ಮಧ್ಯೆ ಜಗಳ ಹಚ್ಚಿ, ಊರಿನ ಶಾಂತಿ ಹಾಳು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಊರಿನ ಜನತೆಗೆ ನೆಮ್ಮದಿ ಒದಗಿಸಲು ಮತ್ತು ಅಧ್ಯಕ್ಷ ಅಶೋಕ ಗಿಲ್ಲಾ ಹೈದ್ರಾಬಾದ ಮತ್ತು ಅವರ ಸಂಗಡಿಗರ ವಿರುದ್ಧ ತನಿಖೆ ನಡೆಸಿ, ಅವರು ಕಬಳಸಿರುವ ಆಸ್ತಿಯನ್ನು ವಸೂಲಿ ಮಾಡಿ, ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು ಹಾಗಾಗಿ ಈ ಕುರಿತು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಫೆ.26 ರಂದು ತಹಸೀಲ್ದಾರ್ ಅವರಿಗೆ ಪತ್ರ ಬರೆದಿದ್ದಾರೆ ಆದರೆ ತಹಸೀಲ್ದಾರ್ ಅವರು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಸದರಿ ವಿಷಯದ ಕುರಿತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು ಕೈಗೊಂಡ ಕ್ರಮದ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಿ ಅದರ ಒಂದು ಪ್ರತಿಯನ್ನು ಈ ಕಾರ್ಯಾಲಯಕ್ಕೆ ಸಲ್ಲಿಸಲು ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಅವರಿಗೆ ಸೂಚಿಸಿದ್ದರೂ ಸಹ, ತಹಸೀಲ್ದಾರ್ ಮಾತ್ರ ಯಾವುದೇ ಕ್ರಮ ಕೈಗೊಳ್ಳದೇ ಮೌನ ವಹಿಸಿದ್ದಾರೆ. ಸುಮಾರು ತಿಂಗಳಿಂದ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸಿದ್ದರೂ, ಯಾವೊಬ್ಬ ಅಧಿಕಾರಿಯೂ ಸ್ಪಂದನೆ ಮಾಡದೇ ಇರುವುದು ನೋಡಿದರೆ ಇದರಲ್ಲಿ ಅಧಿಕಾರಿಗಳು ಶಾಮೀಲಾಗಿರುವ ಅನುಮಾನವಿದೆ ಎಂದು ಆರೋಪಿಸಿದ್ದಾರೆ.

