Oplus_0

ಕೋರವಾರ ಗ್ರಾಮ ಪಂಚಾಯಿತ್ ಪಂಪ್ ಆಪರೇಟರ್ ಸಾವಿನ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬೆಣ್ಣೂರಕರ್ ಆಗ್ರಹ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಮತಕ್ಷೇತ್ರದ ಕೋರವಾರ ಗ್ರಾಮ ಪಂಚಾಯಿತ್ ಕಾರ್ಯಾಲಯದ ಪಂಪ್ ಆಪರೇಟರ್ ಅಣ್ಣಪ್ಪ ಶಂಕರ ಕಲ್ಲಶೆಟ್ಟಿ (35) ಆತ್ಮಹತ್ಯೆ ಪ್ರಕರಣ ಅನುಮಾನಕ್ಕೆ ಕಾರಣವಾಗಿದೆ ಹೀಗಾಗಿ ಈ ಸಾವಿನ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್ ಆಗ್ರಹಿಸಿದ್ದಾರೆ.

ಪಂಪ್ ಆಪರೇಟರ್ ಅಣ್ಣಪ್ಪ ಶಂಕರ ಕಲ್ಲಶೆಟ್ಟಿ ಇತನ 21 ತಿಂಗಳ ವೇತನ ಬಾಕಿ ಇರುವುದರಿಂದ ಮನನೊಂದು ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಒಂದೆಡೆ ಪಂಪ್ ಹೌಸ್ ನಲ್ಲಿ ನೇಣಿಗೆ ಶರಣಾಗಿದ್ದಾನೆ ಇನ್ನೊಂದೆಡೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ ಹೀಗಾಗಿ ಈ ಪ್ರಕರಣ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ತನಿಖೆಯನ್ನು ಮಾಡಿ ತಪ್ಪಿತಸ್ಥರು ಯಾರೇ ಆಗಲಿ ಅವರನ್ನು ಪತ್ತೆ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಹಾಗೂ 25 ಲಕ್ಷ ಪರಿಹಾರ ಹಾಗೂ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!