Oplus_0

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ: ಈಡಿಗ ಸಮಾಜ ಹರ್ಷ

ನಾಗಾವಿ ಎಕ್ಸಪ್ರೆಸ್ 

ಶಹಾಬಾದ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿರುವ ಕಾಂಗ್ರೆಸ್ ಹೈ ಕಮಾಂಡ್ ಗೆ ಕೃತಜ್ಞತೆಗಳು ಸಲ್ಲಿಸಿದ ಆರ್ಯ ಈಡಿಗ ಸಮಾಜವು ಹರ್ಷ ವ್ಯಕ್ತಪಡಿಸಿದೆ.

ಈ ವೇಳೆ ರಾಷ್ಟ್ರೀಯ ಆರ್ಯ ಈಡಿಗ ಮಹಾ ಮಂಡಳಿಯ ತಾಲೂಕು ಅಧ್ಯಕ್ಷ ಭೀಮಯ್ಯ ಗುತ್ತೇದಾರ ಭಂಕೂರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ. ಹರಿಪ್ರಸಾದ್ ಅವರು ದಶಕಗಳಿಂದ ಪಕ್ಷದ ವಿವಿಧ ಜವಾಬ್ದಾರಿಗಳನ್ನು ಅತ್ಯಂತ ನಿಷ್ಠೆಯಿಂದ ನಿಭಾಯಿಸಿದ್ದು, ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರ ಸಂಘಟನಾ ಶಕ್ತಿ ಮತ್ತು ಹೋರಾಟದ ಗುಣವನ್ನು ಗುರುತಿಸಿ ಪಕ್ಷದ ಅತ್ಯುನ್ನತ ಜವಾಬ್ದಾರಿಯನ್ನು ನೀಡಿರುವುದು ಸಮಾಜಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದರು.

ಬಿ.ಕೆ. ಹರಿಪ್ರಸಾದ್ ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ಹೋರಾಟದ ಹಿನ್ನೆಲೆಯನ್ನು ಪರಿಗಣಿಸಿ, ಮುಂದಿನ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಆರ್ಯ ಈಡಿಗ ಸಮಾಜವು ಒಕ್ಕೊರಲಿನಿಂದ ಹೈಕಮಾಂಡಗೆ ಒತ್ತಾಯಿಸುತ್ತದೆ.

ಬಿ.ಕೆ ಹರಿಪ್ರಸಾದ್ ಅವರು ಸಚಿವರಾಗುವುದರಿಂದ ಕೇವಲ ಈಡಿಗ ಸಮಾಜ ಮಾತ್ರವಲ್ಲದೆ, ರಾಜ್ಯದ ಸಮಸ್ತ ಹಿಂದುಳಿದ ವರ್ಗಗಳ, ಶೋಷಿತರ ಮತ್ತು ದೀನದಲಿತರ ಸಬಲೀಕರಣಕ್ಕೆ ಮತ್ತಷ್ಟು ಶಕ್ತಿ ಸಿಗಲಿದೆ ಹಾಗೂ ಅವರು ಸಾಮಾಜಿಕ ನ್ಯಾಯಕ್ಕಾಗಿ ಇನ್ನಷ್ಟು ದಕ್ಷತೆಯಿಂದ ಶ್ರಮಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಬಿ.ಕೆ. ಹರಿಪ್ರಸಾದ್ ಅವರಂತಹ ದಕ್ಷ ನಾಯಕರಿಗೆ ರಾಜ್ಯ ಕಾಂಗ್ರೆಸ್ ಚುಕ್ಕಾಣಿ ನೀಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಮಾಜದ ಪರವಾಗಿ ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ‌ ಎಂದು ಅಧ್ಯಕ್ಷ ಭೀಮಯ್ಯ ಗುತ್ತೇದಾರ ರವರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!