Oplus_0

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಆರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿ ಕೆಪಿಎಸ್ಸಿ ಪ್ರಕಟ

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ಅಧಿಸೂಚನೆ ಸಂಖ್ಯೆ:ಪಿಎಸ್.ಸಿ 517 ಇ(1)/(ಆರ್.ಪಿ.ಸಿ) 2023-24, ದಿನಾಂಕ:01-03-2024 ರಂದು ಅಧಿಸೂಚಿಸಿರುವ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದ ಗ್ರೂಪ್-ಎ ಸಹಾಯಕ ನಿಯಂತ್ರಕರು 43 ಹುದ್ದೆಗಳು ಮತ್ತು ಗ್ರೂಪ್-ಬಿ ಲೆಕ್ಕಪರಿಶೋಧನಾಧಿಕಾರಿ 54 ಹುದ್ದೆಗಳ ನೇಮಕಾತಿಗೆ ದಿನಾಂಕ: 11-08-2024 ರಂದು ನಡೆಸಲಾದ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:20 ಅನುಪಾತದಲ್ಲಿ, ಆರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ದಿನಾಂಕ; 18-10-2024 ರಂದು ಆಯೋಗದ ವೆಬ್ ಸೈಟ್  http://kpsc.kar.nic.in/list/eligibility ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ.ಕೆ ತಿಳಿಸಿದ್ದಾರೆ.

ಮುಖ್ಯಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕದ ಕುರಿತು ಶೀಘ್ರದಲಿಯೇ ತಿಳಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!