Oplus_0

ಕುಲಕುಂದಿ ಗ್ರಾಮದಲ್ಲಿ ಕಸಾಪ ವತಿಯಿಂದ ವಿಶೇಷ ಉಪನ್ಯಾಸ | ಸಾಹಿತ್ಯ ಕ್ಷೇತ್ರಕ್ಕೆ ಶಿವರಾಮ ಕಾರಂತರ ಕೊಡುಗೆ ಅಪಾರ: ಚಿನ್ನಕಟ್ಟಿ

ನಾಗಾವಿ ಎಕ್ಸಪ್ರೆಸ್ 

‌ಚಿತ್ತಾಪುರ: ಜ್ಞಾನಪೀಠ ಪುರಸ್ಕೃತ ಡಾ. ಶಿವರಾಮ ಕಾರಂತರು, ತಮ್ಮ ಜೀವಿತಾವಧಿಯಲ್ಲಿ ಸುಮಾರು 427 ಪುಸ್ತಕಗಳನ್ನು ರಚಿಸಿದರು. ಅವುಗಳಲ್ಲಿ ಕಾದಂಬರಿಗಳು 47, ತಮ್ಮ 96ನೆಯ ವಯಸ್ಸಿನಲ್ಲೂ ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿರುವ ಒಂದು ಸಾಧನೆ ಎನ್ನಬಹುದು ಹೀಗಾಗಿ ಸಾಹಿತ್ಯ ಕ್ಷೇತ್ರಕ್ಕೆ ಕಾರಂತರ ಕೊಡುಗೆ ಅಪಾರವಾಗಿದೆ ಎಂದು ಸಾಹಿತಿ ನರಸಪ್ಪ ಚಿನ್ನಕಟ್ಟಿ ಹೇಳಿದರು.

ತಾಲೂಕಿನ ನಾಲವಾರ ವಲಯ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುಲಕುಂದಿ ಗ್ರಾಮದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೆ.ಶಿವರಾಮ್ ಕಾರಂತರ ಬದುಕು ಬರಹ ಮತ್ತು ಸಾಹಿತ್ಯದ ಅರಿವು ಮೂಡಿಸವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಹಿತಿಯಾಗಿ ಶಿವರಾಮ ಕಾರಂತರು ಪ್ರಸಿದ್ಧಿಯಾಗಿರುವಂತೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದವರು. ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಗಳನ್ನು ಮಾಡಿದ್ದರು ಎಂದು ಸ್ಮರಿಸಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೋಟ ಶಿವರಾಮ ಕಾರಂತರು ಕನ್ನಡ ಸಾಹಿತ್ಯದ ‘ಕರಾವಳಿಯ ಕಡಲ ತೀರದ ಭಾರ್ಗವ’ ಎಂದೇ ಖ್ಯಾತರಾದವರು. ಇವರ “ಮೂಕಜ್ಜಿಯ ಕನಸುಗಳು” ಕಾದಂಬರಿಗೆ 1978 ರಲ್ಲಿ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಇವರು ವಿಜ್ಞಾನ, ಕಲೆ, ಯಕ್ಷಗಾನ, ಪರಿಸರ ಮತ್ತು ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ.

ಕಸಾಪ ಗೌರವ ಸಲಹೆಗಾರ ಶಿವಕುಮಾರ್ ಸುಣಗಾರ ತಾಯಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಹೊರತಂದರೆ ದೇಶವು ಸಮೃದ್ಧಿಯತ್ತ ಸಾಗುತ್ತದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯ, ಸಂಸ್ಕೃತಿ ಮತ್ತು ನೈತಿಕ ಮೌಲ್ಯಗಳ ಅರಿವು ಬೆಳೆಸುವ ಕೆಲಸ ನಿರಂತರವಾಗಿ ನಡೆಯಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು. ‌  ‌

ನಾಲವಾರ ವಲಯ ಕಸಾಪ ಅಧ್ಯಕ್ಷ ಅಂಜುನಾಥ ಎಸ್. ನಾಯ್ಕಲ್ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಅತ್ಯಂತ ಅಗತ್ಯವಾಗಿದೆ. ಕನ್ನಡ ಉಳಿಸಿ ಬೆಳೆಸುವುದಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಗೌರವ ಅತಿಥಿಗಳಾಗಿ ಮಲ್ಲುಗೌಡ ಪೊಲೀಸ್ ಪಾಟೀಲ ಕುಲಕುಂದಿ, ಸಿದ್ದುಗೌಡ ಕುಲಕುಂದಿ, ನಾಗು ಸಾಹುಕಾರ, ಮಲ್ಲೇಶಿ ಪೂಜಾರಿ, ಈರಣ್ಣ ಪೂಜಾರಿ, ಸಾಯಿಬಣ್ಣ ವನಬಾ, ಮಹಾದೇವ ಮಡಿವಾಳ, ಹಯ್ಯಾಳ ಪೂಜಾರಿ, ಮೌನೇಶ, ಈರಣ್ಣಾ ನೀಲೂರ, ಸತೀಶ ಮೇಂಬರ, ವಿರೇಶ ಹಡಪದ, ಬಸ್ಸು ಕಾರಿ, ರವಿ ಮಠದ ನಾಲವಾರ, ಶ್ರೀಧರ ಪತ್ತಾರ ನಾಲವಾರ, ದೇವರಾಜ್ ಪೂಜಾರಿ ನಾಲವಾರ, ಶರಣು ಸಾಹು ಮದರಕಿ, ಉಮೇಶ ಯರಗೋಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಂಗೀತಗಾರ ಶಂಕರ ಹಡಪದ, ತಬಲಾ ವಾದಕ ಮೌನೇಶ ಶಹಾಪೂರ, ಪ್ರಶಾಂತ ಕುಲಕರ್ಣಿ ಹಾಗು ರಶ್ಮಿ ಕುಲಕರ್ಣಿ, ಶಿವಲೀಲಾ ತುನ್ನೂರ ಅವರು ಕವನ ವಾಚನ ಮಾಡಿದರು. ವಲಯ ಕಸಾಪ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಸ್ವಾಗತಿಸಿದರು, ಅರುಣಕುಮಾರ ಸುಣಗಾರ ನಾಲವಾರ ನಿರೂಪಿಸಿದರು, ಕಸಾಪ ಪ.ಪಂ. ಪ್ರತಿನಿಧಿ ಮಲ್ಲಿಕಾರ್ಜುನ ತಳವಾರ ಸುಗೂರ.ಎನ್ ವಂದಿಸಿದರು.

Spread the love

Leave a Reply

Your email address will not be published. Required fields are marked *

You missed

error: Content is protected !!