ಕುಂಬಾರ ಸಮಾಜದ ಏಳಿಗೆಗಾಗಿ ಪ್ರಾಮಾಣಿಕ ಪ್ರಯತ್ನ | ಕುಂಬಾರ ಮಹಾಸಭಾದ ನೂತನ ಅಧ್ಯಕ್ಷ ವಿಶ್ವನಾಥ ಕುಂಬಾರ ಅವರಿಗೆ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಶುಕ್ರವಾರ ನಡೆದ ಕುಂಬಾರ ಸಮಾಜದ ಸಭೆಯಲ್ಲಿ ಅಖಿಲ ಭಾರತ ಕುಂಬಾರ ಮಹಾಸಭಾದ ತಾಲೂಕು ಅಧ್ಯಕ್ಷರಾಗಿ ನೇಮಕಗೊಂಡ ವಿಶ್ವನಾಥ ಎಸ್. ಕುಂಬಾರ ಅವರಿಗೆ ಸಮಾಜದ ಮುಖಂಡರು ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ನೇಮಕವಾದ ಗೌರವಾಧ್ಯಕ್ಷರಾಗಿ ಮಹಾದೇವ ಕುಂಬಾರ ಅಲ್ಲೂರ, ಮೋಗಲಪ್ಪ ಕುಂಬಾರ ಚಿತ್ತಾಪುರ, ಮಹಾದೇವ ಕುಂಬಾರ, ಉಪಾಧ್ಯಕ್ಷರಾಗಿ ಆನಂದ ಕುಂಬಾರ ಚಿತ್ತಾಪುರ, ಸಹ ಕಾರ್ಯದರ್ಶಿ ಬಸವರಾಜ ಕುಂಬಾರ ಅವರಿಗೂ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ವಿಶ್ವನಾಥ ಕುಂಬಾರ, ಸಮಾಜ ಬಾಂಧವರು ತನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು, ತಾಲೂಕಿನಲ್ಲಿ ಕುಂಬಾರ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ಅಖಿಲ ಭಾರತ ಕುಂಬಾರ ಮಹಾಸಭಾ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಜಗದೇವ ಕುಂಬಾರ ಮಾತನಾಡಿ, ಸಂಘಟನೆಯ ಶಕ್ತಿ ಒಗ್ಗಟ್ಟಿನಲ್ಲಿದೆ. ಪದಾಧಿಕಾರಿಗಳು ಸಮಾಜದ ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಈ ಸಮಾರಂಭದಲ್ಲಿ ಶ್ರೀಮಂತ ಕುಂಬಾರ, ಮಹಾದೇವ ಕುಂಬಾರ, ಬಸವರಾಜ ಕುಂಬಾರ, ಶರಣಪ್ಪ ಕುಂಬಾರ ಕರದಾಳ, ಶರಣಪ್ಪ ಕುಂಬಾರ, ಸಂಗಮೇಶ ಕುಂಬಾರ, ಆನಂದ ಮುಡಬೂಳಕರ್ ಕುಂಬಾರ, ರಾಜು ಕುಂಬಾರ, ಅಂಬರೀಶ್ ಕುಂಬಾರ, ರವಿ ಕುಂಬಾರ, ಮಲ್ಲಿಕಾರ್ಜುನ ಕುಂಬಾರ ಅಲ್ಲೂರ, ಮಲ್ಲಿಕಾರ್ಜುನ ಕುಂಬಾರ, ಸಿದ್ದಣ್ಣ ಕುಂಬಾರ, ಸುಭಾಷ ಕುಂಬಾರ, ಜಗದೀಶ್ ಕುಂಬಾರ, ಬಂಡೆಪ್ಪ ಕುಂಬಾರ, ಶರಣಪ್ಪ ಕುಂಬಾರ, ಶರಣಪ್ಪ ಎನ್. ಕುಂಬಾರ, ಮಲ್ಲಿಕಾರ್ಜುನ ಕುಂಬಾರ, ದಶರಥ್ ಕುಂಬಾರ, ಕಾಶಿನಾಥ್ ಕುಂಬಾರ ಬೆಣ್ಣೂರ, ಗುರುರಾಜ್ ಕುಂಬಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

