Oplus_0

ಅಖಿಲ ಭಾರತ ಕುಂಬಾರರ ಮಹಾಸಭಾದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಜಗದೇವ ಕುಂಬಾರ ನೇಮಕ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಅಖಿಲ ಭಾರತ ಕುಂಬಾರರ ಮಹಾಸಭಾದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಜಗದೇವ ಕುಂಬಾರ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ನಿತ್ಯಾಭರಣ ಚೌಡಶೆಟ್ಟಿ ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಕುಂಬಾರ ಸಮಾಜಕ್ಕೆ ಸಲ್ಲಿಸುತ್ತಿದ್ದ ಸೇವೆ ಮತ್ತು ಬದ್ಧತೆಯನ್ನು ಪರಿಗಣಿಸಿ ಗುರುತರವಾದ ಜವಾಬ್ದಾರಿ ನೀಡಲಾಗಿದ್ದು, ಈ ಕೂಡಲೇ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡು ಸಂಘಟನೆಯ ನಿಯಮಾವಳಿ ಹಾಗೂ ಶಿಸ್ತುಬದ್ಧತೆಯೊಂದಿಗೆ ಕಾರ್ಯನಿರ್ವಹಿಸಿ ಸಮಾಜದ ಹಿತಕ್ಕಾಗಿ ಸೇವೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಘಟಕದ ಅಧೀನದಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಮುನ್ನಡೆಸಬೇಕು ಹಾಗೂ ಸಮಾಜದ ಅಭಿವೃದ್ಧಿ, ಯುವ ಶಕ್ತಿಕರಣ ಹಾಗೂ ಹಿಂದುಳಿದವರ ಏಳಿಗೆಗಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಹುದ್ದೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಘಟಕಗಳಿಗೆ ಸೂಕ್ತ ಅನುಭವ ಹೊಂದಿರುವ ಹಾಗೂ ಸಂಘಟನೆಗೆ ಬದ್ಧರಾಗಿರುವ ಸದಸ್ಯರನ್ನು ಆಯ್ಕೆ ಮಾಡಿ, ವಿಭಾಗ ಹಾಗೂ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಅಗತ್ಯ ಪದಾಧಿಕಾರಿಗಳನ್ನು ನೇಮಿಸುವಾಗ ರಾಜ್ಯಾಧ್ಯಕ್ಷರೊಂದಿಗೆ ನಾಯಕರೊಂದಿಗೆ ಚರ್ಚಿಸಿ ನೇಮಿಸಬೇಕು ಈ ನಿಟ್ಟಿನಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಮಾರ್ಗದರ್ಶನದಲ್ಲಿ ಸಂಘಟನೆಯನ್ನು ಬಲಪಡಿಸಬೇಕು ಹಾಗೂ ಅಖಿಲ ಭಾರತ ಕುಂಬಾರರ ಮಹಾಸಭಾದ ನಿಯಮಗಳಿಗೆ ಬದ್ಧರಾಗಿ ಸಂಘಟನೆಯನ್ನು ಮಾಡಬೇಕು, ಈ ನಿಟ್ಟಿನಲ್ಲಿ ಮಹಾಸಭಾದ ಶಕ್ತಿ ಮತ್ತು ಗೌರವ ಹೆಚ್ಚಿಸಬೇಕು ಎಂದು ಸೂಚಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!