ಲಾಡ್ಲಾಪೂರ ಸರ್ಕಾರಿ ಪ್ರೌಢ ಶಾಲೆಗೆ ಶೇ.95 ಫಲಿತಾಂಶ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಲಾಡ್ಲಾಪೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.95 ಫಲಿತಾಂಶ ಬಂದಿದೆ ಎಂದು ಮುಖ್ಯಗುರುಗಳು ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾದ 38 ವಿದ್ಯಾರ್ಥಿಗಳ ಪೈಕಿ 36 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ 1, ಪ್ರಥಮ ಶ್ರೇಣಿ 12, ದ್ವಿತೀಯ ಶ್ರೇಣಿ 12, ತೃತೀಯ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಂಜನಾ ಮೋನಪ್ಪ 625 ಕ್ಕೆ 531 ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಉಳಿದಂತೆ ಬಾಲಪ್ಪ ಚಂದಪ್ಪ 498, ಮೊಹಮ್ಮದ್ ಅಸಾದ್ ಬಾಬಾ ರಸೂಲ್ 487 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯಗುರು, ಶಿಕ್ಷಕರು, ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

