ಎಲ್ಎಲ್ಎಫ್ ಕ್ರೀಡಾಕೂಟ ಉದ್ಘಾಟನೆ | ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಿದ್ದು ಡಾ.ಮಲ್ಲಿಕಾರ್ಜುನ ಖರ್ಗೆ: ಸಂಜಯ ಬುಳಕರ್
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು 371 ಜೆ ಕಲಂ ಜಾರಿ ಮಾಡುವ ಮೂಲಕ ಭದ್ರ ಅಡಿಪಾಯ ಹಾಕಿದ್ದಾರೆ ಎಂದು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂಜಯ ಬುಳಕರ್ ಹೇಳಿದರು.
ಪಟ್ಟಣದ ನಾಗಾವಿ ಕ್ಯಾಂಪಸ್ ನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಎಲ್.ಎಲ್.ಎಫ್ (ಲರ್ನಿಂಗ್ ಲಿಂಕ್ ಫೌಂಡೇಶನ್) ವತಿಯಿಂದ ಹಮ್ಮಿಕೊಂಡಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢ ಹೊಂದಲು ಸಾಧ್ಯ. ಸಚಿವ ಪ್ರಿಯಾಂಕ್ ಖರ್ಗೆಯವರು ನಮ್ಮ ತಾಲೂಕಿನ ಗ್ರಾಮೀಣ ಯುವ ಪ್ರತಿಭೆಗಳಿಗಾಗಿ ಆಧುನಿಕ ಕ್ರೀಡಾಂಗಣ ನಿರ್ಮಿಸಿದ್ದಾರೆ. ಅಲ್ಲದೆ ನಾಗಾವಿ ಹಾಗೂ ವಾಡಿ ಎಜುಕೇಷನ್ ಹಬ್ ನಿರ್ಮಾಣ ಮಾಡಿ ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ, ಆದರ್ಶ ವಿದ್ಯಾಲಯ ಮುಖ್ಯಗುರು ಸಂತೋಷಕುಮಾರ ಜಮಾದಾರ್ ಅವರು ಮಾತನಾಡಿದರು.
ಪ್ರಥಮ ಹಾಗೂ ದ್ವಿತೀಯ ಬಹುಮಾನವನ್ನು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂಜಯ್ ಬುಳಕರ್ ಅವರ ಕಡೆಯಿಂದ ನೀಡಲಾಯಿತು. ಕಬ್ಬಡಿ, ವಾಲಿಬಾಲ್ ಸೇರಿದಂತೆ ಇತರೆ ಆಟಗಳಲ್ಲಿ ಸ್ಪರ್ಧಾರ್ಥಿಗಳು ಭಾಗವಹಿಸಿದರು.
ಈ ಸಂಧರ್ಭದಲ್ಲಿ ಎಲ್.ಎಲ್.ಎಫ್ ಸಂಸ್ಥೆಯ ತಾಲೂಕು ವ್ಯವಸ್ಥಾಪಕ ಗುರುಪ್ಪಾ, ಸಂತೋಷ್ ಕುಮಾರ್, ಎಸ್.ಆರ್ ಪಿ ರೇಷ್ಮಾ ಸೇರಿದಂತೆ ನೂರಾರು ಎಲ್.ಎಲ್.ಎಫ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

