ಮಾಡಬೂಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಮಾಡಬೂಳ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ಕಲಬುರ್ಗಿ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.
ನಂತರ ಮಾಡಬೂಳ ಗ್ರಾಮಕ್ಕೆ ಬೇಕಾದ ಸೌಲಭ್ಯಗಳ ಕುರಿತು ವಿವರಣೆ ನೀಡಿದರು. ಶಾಲಾ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಇಲ್ಲಿ ಒಂದು ಡಿಗ್ರಿ ಕಾಲೇಜು ಹಾಗೂ ಒಂದು ಹಾಸ್ಟೆಲ್ ಅವಶ್ಯಕತೆ ಇದೆ ಹಾಗೂ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಬ್ಯಾಂಕಿನ ಸೌಲಭ್ಯ ಒದಗಿಸಬೇಕು, ರಸ್ತೆ, ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ವಿವಿಧ ಬೇಡಿಕೆಗಳ ಮತ್ತು ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಚಿತ್ತಾಪುರ ಟಿಎಪಿಸಿಎಂ ಅಧ್ಯಕ್ಷ ವೀರಯ್ಯ ಹಿರೇಮಠ, ಸುನಿಲ್ ಗೌಡ ಮಾಡಬೂಳ, ಮಲ್ಲಿಕಾರ್ಜುನ ಸಜ್ಜನ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

