Oplus_0

ಕಬ್ಬು ಸಾಗಾಣಿಕೆ ಮಾಡುವ ವಾಹನಗಳಿಗೆ ಟೋಲ್ ತೆರಿಗೆಯಿಂದ ವಿನಾಯಿತಿ ನೀಡುವಂತೆ ಆಗ್ರಹಿಸಿ ಮಾಡಬೂಳ ಟೋಲ್ ಬಂದ್ ಮಾಡಿ ಪ್ರತಿಭಟನೆ 

ನಾಗಾವಿ ಎಕ್ಸಪ್ರೆಸ್

ಕಾಳಗಿ: ರೈತರ ಕಬ್ಬು ಸಾಗಾಣಿಕೆ ಮಾಡುತ್ತಿರುವ ವಾಹನಗಳ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಟೊಲ್ ನಾಕಾ ವಸೂಲಿ ಮಾಡುತ್ತಿರುವುದು ಕೈ ಬಿಟ್ಟು ವಿನಾಯ್ತಿ ಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್) ನೇತೃತ್ವದಲ್ಲಿ ಕಬ್ಬು ಬೆಳೆಗಾರ ರೈತರು ಬುಧವಾರ ಮಾಡಬೂಳ ಟೊಲ್ ನಾಕಾ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಮಾತನಾಡಿ, ಸಿಹಿ ಬೆಳೆದು ಕಹಿ ಉಣ್ಣುವ ಕಬ್ಬು ಬೆಳೆಗಾರರ, ಕಲಬುರಗಿ ಜಿಲ್ಲೆ ತೊಗರಿ ನಾಡು ಎಂಬ ಕೀರ್ತಿಗೆ ಪಾತ್ರವಾದಂತೆ “ಇತ್ತಿಚೆಗೆ ಕಬ್ಬು ಬೆಳೆಗಾರರ ಕಬ್ಬಿನ ಮೇಲೆ ಅವಲಂಭಿತರಾದ ರೈತರ ಅತಿವೃಷ್ಟಿ ಮಳೆಯಿಂದ ರೈತರ ರೊಕ್ಕದ ಮಾಲು ತೋಗರಿ, ಹೆಸರು, ಉದ್ದು, ಸೋಯಾ, ಹತ್ತಿ, ಬೆಳೆಗಳು ಹಾನಿಯಾಗಿವೆ ಉಳಿದ ಒಂದೆ ಕಬ್ಬು, ಸಕ್ಕರೆ ಇಳುವರಿಯಲ್ಲಿ, ಕಬ್ಬಿನ ತೂಕದಲ್ಲಿ, ಮೋಸ ಮತ್ತು ಸೂಕ್ತವಾದ ಬೆಂಬಲ ಬೆಲೆ ಇಲ್ಲದೆ ಕಂಗಾಲಾಗುವಂತೆ ಮಾಡಿದೆ, ಇಂತಹ ಸಂಕಷ್ಟದ ಸಮಯದಲ್ಲಿ ಕಬ್ಬು ಬೆಳೆಗಾರರಿಗೆ ಒಂದಲ್ಲಾ ಒಂದು ಕಡೆ ಅನ್ಯಾಯ ಮಾಡುತ್ತಲೇ ಬರುತ್ತಿದ್ದಾರೆ, ಕಬ್ಬು ಬೆಳೆಗಾರರ ಮೇಲಿನ ಶೋಷಣೆ ತಡೆಗಟ್ಟಲು ಕಬ್ಬು ಬೆಳೆಗಾರರು ಆಗ್ರಹಿಸಿದರು.

ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಾಣಿಕೆ ಮಾಡುತ್ತಿರುವ ರೈತರ ಹತ್ತಿರ ಹಣ ವಸೂಲಿ ಮಾಡಿ ರೈತರಿಗೆ ಅನ್ಯಾಯ ಮಾಡುತ್ತಿರುವ ಟೊಲ್ ನಾಕಾಗಳು ರೈತ ವಿರೋಧಿಗಳಾಗಿವೆ. ನಿಜವಾಗಲೂ ರೈತರ ಕಬ್ಬು ಸಾಗಾಣಿಕೆ ಮಾಡುತ್ತಿರುವ ಲಾರಿಗಳು, ಟ್ರ್ಯಾಕ್ಟರ್ ಗಳ ರೈತರ ಹತ್ತಿರ ಹಣ ವಸೂಲಿ ಮಾಡುವುದು ಕೈ ಬಿಟ್ಟು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಾಣಿಕೆ ಮಾಡುತ್ತಿರುವ ಗಾಡಿಗಳಿಗೆ ವಿನಾಯ್ತಿ ನೀಡಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ವೀರಣ್ಣ ಗಂಗಾಣಿ ಮಾತನಾಡಿ, ಕಬ್ಬು ಬೆಳೆಗಾರರ ವಿರೋಧಿ ನೀತಿ ಅನುಸರಿಸುತ್ತಿರುವ ಟೋಲ್ ನಾಕಾ ಕ್ರಮವನ್ನು ರೈತ ಸಂಘ ಉಗ್ರವಾಗಿ ಖಂಡಿಸುತ್ತದೆ. ರಸ್ತೆಗಳು ಹದಗೆಟ್ಟು ಹೋಗಿವೆ ಟೊಲ್ ಫ್ಲಾಜಾ ಇದರ ಅವಧಿ ಎಲ್ಲಿಯವರೆಗೆ ಇದೆ ಎಂಬುದು ಯೋಚಿಸಲಿ ಮತ್ತು ಫಾಸ್ಟ್ ಟ್ಯಾಗ್ 10 ಸೆಕೆಂಡಗಳಲ್ಲಿ ವಾಹನಗಳು ದಾಟಬೇಕು, ಇದು ಬಹಳ ಸಮಯ ಹಿಡಿಯುತ್ತದೆ ಇದರ ಮೇಲೆ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು ಹಾಗೂ ಸಣ್ಣೂರು ಬಳಿ ಇರುವ ಟೋಲ್ ಪ್ಲಾಜಾ ಮೇಲೆ ತನಿಖೆ ನಡೆಸಿ ಕಾನೂನಿನ ಪ್ರಕಾರ ಶಿಸ್ತಿನ ಕ್ರಮ ಜರುಗಿಸಬೇಕು. ಒಂದು ವೇಳೆ ನಿರ್ಲಕ್ಷ ಧೋರಣೆ ತೋರಿದ್ದಲ್ಲಿ ಮುಂದಿನ ದಿನಗಳಲ್ಲಿ ಟೊಲ್ ಪ್ಲಾಜಾ ಬಂದ್ ಮಾಡಿ ಉಗ್ರವಾದ ಹೋರಾಟ ನಡೆಸಬೆಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಜೆ ದಿನಗಳಲ್ಲಿ ಟೋಲ್ ದರ ಹೆಚ್ಚಳದಿಂದ ಜನರ ಬದುಕು ಮತ್ತಷ್ಟು ದುಸ್ಥರ ಆಗಿದೆ. ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ ಪ್ರೆಸ್‌ವೇಗಳಲ್ಲಿ ಟೋಲ್ ದರವನ್ನು ಶೇ.4 ರಿಂದ ಶೇ.5ರಷ್ಟು ಹೆಚ್ಚಳ ಮಾಡಿದ್ದು, ಮಂಗಳವಾರದಿಂದಲೇ ಜಾರಿಯಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ನೀತಿಯು ಜನಸಾಮಾನ್ಯರ ಬದುಕನ್ನು ಮತ್ತಷ್ಟು ದುಸ್ಥರಗೊಳಿಸಿದೆ ಎದು ಹೇಳಿದರು.

ದೇಶದ ಕೋಟ್ಯಂತರ ಜನರ ರಜಾಕಾಲದ ಈ ದಿನಗಳಲ್ಲಿ ಪ್ರವಾಸ, ಮದುವೆ ಹಬ್ಬ ಇತ್ಯಾದಿಗಳಲ್ಲಿ ಕುಟುಂಬದ ಸದಸ್ಯರು ಬಂಧುಬಳಗಗಳ ಜತೆ ದೂರ ದೂರ ಪ್ರದೇಶಗಳಿಗೆ ವಾಹನಗಳಲ್ಲಿ ಸಂಚರಿಸುವ ಅನಿವಾರ್ಯತೆಯಲ್ಲಿ ಇದ್ದಾರೆ. ಇಂತಹ ಅವಕಾಶವನ್ನೇ ಬಳಸಿ ಕೇಂದ್ರ ಸರ್ಕಾರ ಜನರ ಬದುಕಿನ ಮೇಲೆ ಮತ್ತಷ್ಟು ಹೊರೆ ಹೊರಿಸಲು ಹೊರಟಿರುವುದು ಅನ್ಯಾಯದ ಪರಮಾವಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ನಿರಂತರವಾಗಿ ಏರುತ್ತಿರುವ ಬೆಲೆಗಳಿಂದಾಗಿ ಮತ್ತು ಮೋದಿ ಸರ್ಕಾರದ ಶ್ರೀಮಂತ ಪರ ನೀತಿಗಳಿಂದಾಗಿ ಈಗಾಗಲೇ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಜನರ ಬದುಕಿನ ಪ್ರಶ್ನೆ ಬಂದಾಗಲೆಲ್ಲ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸದಾ ಒಂದೇ ನಾಣ್ಯದ ಎರಡು ಮುಖಗಳು ಎನ್ನುವ ಮಾತುಗಳು ಈ ಡೀಸೆಲ್ ಹಾಗೂ ಟೋಲ್ ದರ ಏರಿಕೆ ವಿಷಯದಲ್ಲಿ ಸಾಭೀತಾಗಿವೆ. ಒಟ್ಟಾರೆ ಎರಡು ಸರ್ಕಾರಗಳ ಈ ನೀತಿಗಳು ಕಾರ್ಪೊರೇಟ್ ವಲಯದವನ್ನು ತುಷ್ಟಿಕರಣಗೊಳಿಸುವ ಹಂಬಲ ಹೊಂದಿವೆ. ಇಂತಹ ನೀತಿಗಳ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘ ಕಲಬುರಗಿ ಜಿಲ್ಲಾ ಸಮಿತಿ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಶರಣಪ್ಪಾ ಪೂಜಾರಿ ಸಿದ್ದು ಎಸ್.ಎಲ್, ಕರೆಪ್ಪಾ ಕರಗೊಂಡ, ರಮೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!