Oplus_0

ಅತಿ ಹಿಂದುಳಿದ ಮಠಾಧೀಶರ ಮಹಾಸಭಾದ ರಾಜ್ಯ ಗೌರವಾಧ್ಯಕ್ಷರಾಗಿ ಉಪ್ಪಾರ ಗುರುಪೀಠದ ಶ್ರೀ ಜಗದ್ಗುರು ಭಗೀರಥನಂದಪುರಿ ಸ್ವಾಮೀಜಿ ನೇಮಕ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಅತಿ ಹಿಂದುಳಿದ ಮಠಾಧೀಶರ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಛಲವಾದಿ ಗುರುಪೀಠದ ಶ್ರೀ ಜಗದ್ಗುರು ಬಸವನಾಗಿದೇವ ಶರಣರ ಆದೇಶದ ಮೇರೆಗೆ ರಾಮಪೂರಹಳ್ಳಿಯ ಅಖಿಲ ಭಾರತ ಉಪ್ಪಾರ ಗುರುಪೀಠದ ಶ್ರೀ ಜಗದ್ಗುರು ಭಗೀರಥನಂದಪುರಿ ಸ್ವಾಮೀಜಿಗಳನ್ನು ರಾಜ್ಯ ಗೌರವಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಬ್ರಹ್ಮಶ್ರೀ ನಾರಾಯಣ ಶಕ್ತಿ ಪೀಠದ ಶ್ರೀ ಡಾ. ಪ್ರಣವಾನಂದ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೂಡಲೆ ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಮಹಾಸಭಾದ ಬಲವರ್ಧನೆಗೆ ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.

ಉಪ್ಪಾರ ಸಮಾಜ ಹರ್ಷ: ಅಖಿಲ ಭಾರತ ಉಪ್ಪಾರ ಗುರುಪೀಠದ ಶ್ರೀ ಜಗದ್ಗುರು ಭಗೀರಥನಂದಪುರಿ ಸ್ವಾಮೀಜಿಗಳು ಅತಿ ಹಿಂದುಳಿದ ಮಠಾಧೀಶರ ಮಹಾಸಭಾದ ರಾಜ್ಯ ಗೌರವಾಧ್ಯಕ್ಷರಾಗಿ ನೇಮಕ ಆಗಿರುವುದಕ್ಕೆ ಗುರುಪೀಠದ ಪದಾಧಿಕಾರಿಗಳು ಹಾಗೂ ಉಪ್ಪಾರ ಸಮಾಜದ ಮುಖಂಡರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!