ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಮಹಾಂತಪ್ಪ ಸಂಗಾವಿ ಕಂಬನಿ
ನಾಗಾವಿ ಎಕ್ಸಪ್ರೆಸ್
ಕಲಬುರ್ಗಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನ ಹೊಂದಿರುವ ಸುದ್ದಿಯು ಅತ್ಯಂತ ದುಃಖವನ್ನು ಉಂಟು ಮಾಡಿದೆ. ಆರ್ಥಿಕ ತಜ್ಞರಾಗಿ, ಪ್ರಧಾನ ಮಂತ್ರಿಯಾಗಿ ಹತ್ತು ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ್ದರು. ಅವರ ಅಗಲಿಕೆಯು ದೇಶಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದು ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಕೆ.ಸಂಗಾವಿ ಅವರು ಕಂಬನಿ ಮಿಡಿದಿದ್ದಾರೆ
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.