ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ನುಡಿದ ಮಾಲಗತ್ತಿ ಶ್ರೀ ಚನ್ನಬಸವ ಶರಣರ ಭವಿಷ್ಯ ನಿಜವಾಗಿದೆ, ಮುಖಂಡರು ಹರ್ಷ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 45 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ವಷ್ಟ ಬಹುಮತ ಪಡೆಯಲಿದೆ ಎಂದು ಮಾಲಗತ್ತಿ ಹಿರೊಡೇಶ್ವರ ದೇವಸ್ಥಾನದ ಪೀಠಾಧಿಪತಿ ಚನ್ನಬಸವ ಶರಣರು ನುಡಿದ ಭವಿಷ್ಯ ನಿಜವಾಗಿದೆ. ಇದಕ್ಕೆ ಬಿಜೆಪಿ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಡೆಂಗಿ ಹಾಗೂ ಸುಬೇದಾರ್ ಸುರಪುರ ಅವರು ಕಳೆದ ಬುಧವಾರ ಮಠಕ್ಕೆ ಆಗಮಿಸಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷ ಬಹುಮತ ಪಡೆಯಲಿದೆ ಎಂದು ಕೇಳಿದ ಪ್ರಶ್ನೆಗೆ, ಬಿಜೆಪಿ ಸ್ವಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಮಾಲಗತ್ತಿ ಶರಣರು ಭವಿಷ್ಯ ನುಡಿದಿದ್ದಾರೆ. ಅದರಂತೆ ದೆಹಲಿ ವಿಧಾನಸಭೆಯ 70 ಸ್ಥಾನಗಳ ಪೈಕಿ 48 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರಲಿದೆ ಬಿಜೆಪಿ ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಹೊರಹೊಮ್ಮಲಿದೆ ಹಾಗೂ ಅಕ್ಕಲಕೋಟ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಯ ಗಳಿಸಲಿದ್ದಾರೆ ಎಂದು ನುಡಿದ ಭವಿಷ್ಯ ಆಗಲು ನಿಜವಾಗಿತ್ತು.