ಮಾಲಗತ್ತಿ ಶ್ರೀ ಚನ್ನಬಸವ ಶರಣರಿಗೆ ಗೌರವ ಡಾಕ್ಟರೇಟ್ ಪ್ರದಾನ
ನಾಗಾವಿ ಎಕ್ಸಪ್ರೆಸ್
ಶಹಾಬಾದ: ತಾಲೂಕಿನ ಸುಕ್ಷೇತ್ರ ಮಾಲಗತ್ತಿಯ ಶ್ರೀ ಹಿರೋಡೇಶ್ವರ ದೇವಸ್ಥಾನದ ಪೂಜ್ಯ ಶ್ರೀ ಚನ್ನಬಸವ ಶರಣರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಅಮೇರಿಕಾ ವೀಸಡಮ್ ಪಿಸ್ ಯುನಿವರ್ಸಿಟಿಯ, ಅಮೇರಿಕಾ ವೀಸಡಮ್ ಅಕಾಡೆಮಿ ವತಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಮುಖ್ಯಸ್ಥರು ತಿಳಿಸಿದ್ದಾರೆ.
ಪೂಜ್ಯರಿಗೆ ಗೌರವ ಡಾಕ್ಟರೇಟ್ ಸಂದಿದ್ದಕ್ಕೆ ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ ಜೈನ, ಉಪಾಧ್ಯಕ್ಷ ಮಲ್ಲಣ್ಣ ಸಣಮೋ, ಗ್ರಾಮದ ಕೆ.ರಮೇಶ ಭಟ್ಟ, ಈಶ್ವರ ಮುಗುಳನಾಗಾವ, ಮಲ್ಲಿಕಾರ್ಜುನ ಇಟಗಿ ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

