Oplus_0

ಮುಖ್ಯಮಂತ್ರಿ ಬದಲಾವಣೆ ಸಂದರ್ಭ ಬಂದರೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಮಾಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಮಹಾಂತಪ್ಪ ಸಂಗಾವಿ ಮನವಿ 

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಮಾಡುವ ಸುದ್ದಿ ಮಾಧ್ಯಮದಲ್ಲಿ ಮೇಲಿಂದ ಮೇಲೆ ಪ್ರಸಾರವಾಗುತ್ತಿದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಮಾಡುವ ಸಂದರ್ಭ ಬಂದರೆ ಎಐಸಿಸಿ ಅಧ್ಯಕ್ಷರು ಮತ್ತು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡಬೇಕೆಂದು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹಾಂತಪ್ಪ.ಕೆ.ಸಂಗಾವಿ ರವರು ಕಾಂಗ್ರೆಸ್ ವರಿಷ್ಠ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಡಾ.ಮಲ್ಲಿಕಾರ್ಜುನ ಖರ್ಗೆಜೀಯವರು ರಾಷ್ಟ್ರ ಕಂಡ ಅಪರೂಪದ ರಾಜಕಾರಣಿಯಾಗಿದ್ದಾರೆ. ಹಿರಿಯರು, ಅನುಭವಿ ರಾಜಕಾರಣಿಯೂ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರು ಆಗಿದ್ದಾರೆ. ತಳಮಟ್ಟದಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುತ್ತಾ ಕೆಪಿಸಿಸಿ ಅಧ್ಯಕ್ಷರಾಗಿ, ಎಐಸಿಸಿ ಅಧ್ಯಕ್ಷರ ಸ್ಥಾನಕ್ಕೆ ಬೆಳೆದು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ, ನಿಷ್ಠೆ ಹಾಗೂ ಶಿಸ್ತಿನ ಸಿಪಾಯಿಯಾಗಿದ್ದಾರೆ. ಅಭಿವೃದ್ಧಿಗೆ ಇನ್ನೊಂದು ಹೆಸರೇ ಅದು ಡಾ.ಮಲ್ಲಿಕಾರ್ಜುನ ಖರ್ಗೆಜೀ ಎಂದು ಹೇಳಬಹುದು. ಇಂತಹ ಹಿರಿಯ ಅನುಭವಿ ರಾಜಕಾರಣಿಯನ್ನು ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಮಹಾಂತಪ್ಪ.ಕೆ.ಸಂಗಾವಿ ರವರು ಕಾಂಗ್ರೆಸ್ ಪಕ್ಷದ ವರಿಷ್ಠ ಮಂಡಳಿಗೆ ಮನವಿ ಮಾಡಿಕೊಂಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!