ಮೊಗಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೋಂದಣಿ ಪ್ರಮಾಣ ವಿತರಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರ್ಗಿ ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಕಚೇರಿಯಲ್ಲಿ ತಾಲೂಕಿನ ಮೊಗಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೋಂದಣಿ ಪ್ರಮಾಣ ಪತ್ರವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಅಧಿಕಾರಿಗಳಾದ ವಿರೇಶ್ ಪಾಟೀಲ, ಸಂಜು, ಮಲ್ಲಿಕಾರ್ಜುನ, ಮೊಗಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಾಜ ಪೂಜಾರಿ, ಉಪಾಧ್ಯಕ್ಷ ರವಿ ಭೀಮಾ ರಾಠೋಡ, ಕಾರ್ಯದರ್ಶಿ ಮಲ್ಲಮ್ಮ ಪೂಜಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಅಧಿಕಾರಿಗಳು ಇದ್ದರು.