ಮೊರಾರ್ಜಿ ವಸತಿ ಶಾಲೆಯಲ್ಲಿ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ವಿಜ್ಞಾನ ಮೇಳ ಆಯೋಜನೆ
ನಾಗಾವಿ ಎಕ್ಸಪ್ರೆಸ್
ಚಿತಾಪುರ: ಪಟ್ಟಣದ ನಾಗಾವಿ ಕ್ಯಾಂಪಸ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ವಿಜ್ಞಾನ ಮೇಳ ಬಹಳ ಅರ್ಥಪೂರ್ಣವಾಗಿ ನಡೆಯಿತು.
ಈ ವಿಜ್ಞಾನ ಮೇಳದಲ್ಲಿ ಶಾಲೆಯ ಅನೇಕ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. 60ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿ ತಮ್ಮ ಸೃಜನಶೀಲತೆ ಹಾಗೂ ವೈಜ್ಞಾನಿಕ ಚಿಂತನೆಗೆ ಸಾಕ್ಷಿಯಾದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಾಚಾರ್ಯ ಡಾ. ಶರಣಪ್ಪ ಕವಡೆ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಪ್ರಯತ್ನವನ್ನು ಪ್ರಶಂಸಿಸಿದರು. ವಿಶೇಷ ಅತಿಥಿಯಾಗಿ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಸಂಸ್ಥಾಪಕ ಅಜಿತ ಕುಮಾರ್ ಪಂಚಾಳ ಮಾತನಾಡಿ, ವಿದ್ಯಾರ್ಥಿಗಳಿಗೆ ವಿಜ್ಞಾನಾಭಿಮಾನ ಬೆಳೆಸಿಕೊಳ್ಳುವಂತೆ ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಬಸವರಾಜ ಅವಂಟಿ ಪ್ರಾಚಾರ್ಯರು ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಜ್ಞಾನ ಮೇಳವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಮಹತ್ವದ ವೇದಿಕೆಯಾಯಿತು.
ಹಾಸ್ಟೆಲ್ ವಾರ್ಡನ್ ಅಶೋಕ್ ಲಸ್ಕರ್, ಜ್ಯೋತಿ ಪಾಟೀಲ್, ವೀಣಾ, ಭಾಗ್ಯಜ್ಯೋತಿ, ವಿಜಯಲಕ್ಷ್ಮಿ, ರೇಣುಕಾ ಪಾಟೀಲ್, ಶ್ರೀಶೈಲ್ ಅಳ್ಳೊಳ್ಳಿ, ನಟರಾಜ್ ಶಿಲ್ಪಿ, ಶಿವರಾಜ್ ದೇವಿ, ನಂದಕುಮಾರ್ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.

