ಮೌನೇಶ್ ಭಂಕಲಗಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಏಷ್ಯಾ ಅಂತರರಾಷ್ಟ್ರೀಯ ಸಂಸ್ಕೃತಿ ಅಕಾಡೆಮಿಯ ಆಡಳಿತ ಮಂಡಳಿಯ ಅನುಮೋದನೆ ಮೇರೆಗೆ ಏಷ್ಯಾ ಅಂತರರಾಷ್ಟ್ರೀಯ ಸಂಸ್ಕೃತಿ ಸಂಶೋಧನಾ ವಿಶ್ವವಿದ್ಯಾಲಯ (ಲಾವೋ ಯುಎಸ್ಎ) ವತಿಯಿಂದ ಕೃಷಿ ಮತ್ತು ಸಾಮಾಜಿಕ ಸೇವೆ ವಿಭಾಗದಲ್ಲಿ ಮೌನೇಶ್ ಭಂಕಲಗಿ ಅವರಿಗೆ ಬೆಂಗಳೂರಿನಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯದ ಚಾನ್ಸಲರ್ ತಿಳಿಸಿದ್ದಾರೆ.
ಚಿತ್ತಾಪುರ ತಾಲೂಕಿನ ಭಂಕಲಗಿ ಗ್ರಾಮದ ಮೌನೇಶ್ ಭಂಕಲಗಿ ಅವರು ರೈತ ಸಂಘದ ತಾಲೂಕು ಅಧ್ಯಕ್ಷರಾಗಿ ಸಲ್ಲಿಸಿದ ಸಮಾಜ ಸೇವೆ ಹಾಗೂ ತಮ್ಮ ಸ್ವಂತ ಜಮೀನಿನಲ್ಲಿ ತೋಟಗಾರಿಕೆ ಕೃಷಿಯಲ್ಲಿ ಸಾಧನೆಗೈದ ಶ್ರೀಯುತರ ಸೇವೆಯನ್ನು ಗುರುತಿಸಿ ಏಷ್ಯಾ ಅಂತರರಾಷ್ಟ್ರೀಯ ಸಂಸ್ಕೃತಿ ಸಂಶೋಧನಾ ವಿಶ್ವವಿದ್ಯಾಲಯ ಅವರು ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದಕ್ಕೆ ಗ್ರಾಮಸ್ಥರು ಅಭಿನಂದನೆಗಳು ಸಲ್ಲಿಸಿದ್ದಾರೆ.
ಮೌನೇಶ್ ಭಂಕಲಗಿ ಅವರು ಚಿಕ್ಕ ವಯಸ್ಸಿನಲ್ಲೇ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ ಈ ಮೂಲಕ ಭಂಕಲಗಿ ಗ್ರಾಮಕ್ಕೆ ಹಾಗೂ ಚಿತ್ತಾಪುರ ತಾಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳು ಸಲ್ಲಿಸಿದ್ದಾರೆ.