ಮುಗಟಾ ಗ್ರಾಮದಲ್ಲಿ ಗಣರಾಜ್ಯೋತ್ಸವ, ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಭಾರತ ದೇಶದ ಸರ್ವಶ್ರೇಷ್ಠ ಗ್ರಂಥ ಸಂವಿಧಾನ: ಯಲ್ಲಾಲಿಂಗ ಪೂಜಾರಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಭಾರತ ದೇಶದ ಸರ್ವಶ್ರೇಷ್ಠ ಗ್ರಂಥ ಸಂವಿಧಾನ ಆಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಯಲ್ಲಾಲಿಂಗ ಬೆಂಕಿ ಪೂಜಾರಿ ಹೇಳಿದರು.
ಮತಕ್ಷೇತ್ರದ ಮುಗಟಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದ ಅವರು, ನಮ್ಮ ದೇಶದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಆಡಳಿತ ನಡೆಯಲು ಸಂವಿಧಾನವೇ ಮೂಲಾಧಾರ ಆಗಿದೆ ಎಂದು ಹೇಳಿದರು.
ಚಿತ್ತಾಪುರ ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂವಿಧಾನದ ತತ್ವಸಿದ್ಧಾಂತಗಳಡಿ ಹಾಗೂ ಬುದ್ಧ, ಬಸವ ಅಂಬೇಡ್ಕರ್ ಅವರ ವಿಚಾರಧಾರೆಗಳಡಿ ಜನಸೇವೆಯಲ್ಲಿ ತೊಡಗಿದ್ದಾರೆ. ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರಿಂದ ಪ್ರಸ್ತುತ ಶೈಕ್ಷಣಿಕ ಕ್ರಾಂತಿಯಾಗಿದೆ ಎಂದು ಹೇಳಿದರು.
ಮುಖ್ಯಗುರು ಮತಾಬ್ ಸಾಬ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ. ಸಂವಿಧಾನದ ಆಶಯಗಳಿಗೆ ದಕ್ಕೆ ಬಾರದಂತೆ ಎಲ್ಲರೂ ಸಂವಿಧಾನಕ್ಕೆ ಗೌರವ ನೀಡಬೇಕು, ನಮಗೆ ಸಂವಿಧಾನವೇ ಶ್ರೇಷ್ಠ ಗ್ರಂಥವಾಗಿದೆ ಎಂದು ಹೇಳಿದರು. ಗಣರಾಜ್ಯ ಎಂದರೆ ಪ್ರಜಾ ರಾಜ್ಯ, ರಾಜಪ್ರಭುತ್ವ ಹೋಗಿ ಪ್ರಜಾಪ್ರಭುತ್ವ ಜಾರಿಯಲ್ಲಿದೆ ಸಂವಿಧಾನದ ಅನುಸಾರ ಆಡಳಿತ ನಡೆಯುತ್ತಿದೆ ಎಂದರು.
ಗಣರಾಜ್ಯೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದ ಯಲ್ಲಾಲಿಂಗ ಪೂಜಾರಿ ಅವರ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್ಡಿಎಂಸಿ ಅಧ್ಯಕ್ಷ ಮಲ್ಲಿನಾಥ ಹೊಸಮನಿ, ಉಪಾಧ್ಯಕ್ಷೆ ರುಕ್ಸನಾ ಬೇಗಂ, ಗ್ರಾಮ ಪಂಚಾಯಿತಿ ಸದಸ್ಯ ಸಮೀ ಪಟೇಲ್, ಪ್ರಮುಖರಾದ ಮಲ್ಲಿಕಾರ್ಜುನ, ಹಸನ್ ಪಟೇಲ್ ಮಾಲಿ, ಮೊಹಮ್ಮದ್ ಪಟೇಲ್ ಪಂಚ್, ಮುದ್ದಾಸೀರ್, ಯಾಸೀನ್, ರಜಾಕ್ ಪಟೇಲ್, ಉರ್ದು ಶಾಲೆ ಎಸ್ಡಿಎಂಸಿ ಅಧ್ಯಕ್ಷ, ಕಿರಣ್ ಕುಮಾರ್, ತೌಫಿಕ್, ವಾಸೀಮ್ ಪಟೇಲ್, ಸಹ ಶಿಕ್ಷಕಿಯರಾದ ಶಾಂತಾಬಾಯಿ, ವಿಜಯಲಕ್ಷ್ಮೀ, ರೇಖಾಬಾಯಿ, ಶಾಂತಾ, ವೆಂಕಟೇಶ್, ವಿದ್ಯಾ ಸೇರಿದಂತೆ ಇತರರು ಇದ್ದರು.